ಐಪಿಎಲ್ 2026 ರ ಪ್ಲೇಆಫ್ ಸುತ್ತಿನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಕ್ವಾಲಿಫೈಯರ್ 1 ಪಂದ್ಯವನ್ನು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಶುಭಮನ್ ಗಿಲ್ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದರೆ, ರಜತ್ ಪತಿದಾರ್ ಆರ್ಸಿಬಿ ತಂಡದ ನಾಯಕರಾಗಿದ್ದಾರೆ. ಈ ಪಂದ್ಯವನ್ನು ಗೆದ್ದ ತಂಡವು ನೇರವಾಗಿ ಫೈನಲ್ಗೆ ತಲುಪುತ್ತದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗುತ್ತದೆ. ಆದಾಗ್ಯೂ, ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಮೊದಲ ಪ್ರಯತ್ನದಲ್ಲೇ ಅಂತಿಮ ಸುತ್ತಿಗೆ ತಲುಪಲು ಪ್ರಯತ್ನಿಸುತ್ತವೆ.
