IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಧ್ಯ ಭಾಗದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ತನ್ನ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್ಆರ್ಹೆಚ್ ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ ಕೊಟ್ಟಿದ್ದಾರೆ. ಅವರೆಂದರೆ…
ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಇಂಗ್ಲೆಂಡ್ ವೇಗಿ ಡೇವಿಡ್ ಪೇನ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಸೌತ್ ಆಫ್ರಿಕಾದ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಅವರನ್ನು ಎಸ್ಆರ್ಹೆಚ್ ತಂಡ ಆಯ್ಕೆ ಮಾಡಿಕೊಂಡಿದೆ.
ಹಾಗೆಯೇ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿರುವ ಇಂಗ್ಲೆಂಡ್ ಆಲ್ರೌಂಡರ್ ಬ್ರೈಡನ್ ಕಾರ್ಸ್ ಅವರ ಬದಲಿಗೆ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಶ್ರೀಲಂಕಾ ವೇಗಿ ದಿಲ್ಶನ್ ಮಧುಶಂಕ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡವು ಇಂದು (ಏ.18) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದ ಆಯ್ಕೆಗೆ ದಿಲ್ಶನ್ ಮಧುಶಂಕ ಲಭ್ಯರಿರಲಿದ್ದಾರೆ. ಆದರೆ ಜೆರಾಲ್ಡ್ ಕೋಟ್ಝಿ ಮುಂದಿನ ಮ್ಯಾಚ್ಗೂ ಮುನ್ನ ಎಸ್ಆರ್ಹೆಚ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಇಶಾನ್ ಕಿಶನ್ (ಉಪನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶಾನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರ, ಸಾಕಿಬ್ ಹುಸೈನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್ಸ್ಟೋನ್ಸ್, ಶಿವಂ ಮಾವಿ, ದಿಲ್ಶನ್ ಮಧುಶಂಕ, ಜೆರಾಲ್ಡ್ ಕೋಟ್ಝಿ.
