Iran vs Pak: ನಮ್ಮ ಪಾರ್ಟ್ನರ್ ತಂಟೆಗೆ ಬಂದರೆ ಸುಮ್ಮನಿರಲ್ಲ: ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ – Kannada News | Pakistan openly reminds Iran of its defence pact with Saudi Arabia

ಇಸ್ಲಾಮಾಬಾದ್, ಮಾರ್ಚ್ 4: ಸೌದಿ ಅರೇಬಿಯಾ ಮೇಲೆ ದಾಳಿ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆಯ ಸಂದೇಶ ರವಾನಿಸಿದೆ. ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ಮಿಲಿಟರಿ ಒಪ್ಪಂದ (Pakistan Saudi Arabia bilateral defence pact) ಹೊಂದಿದೆ. ಈ ಒಪ್ಪಂದದ ಪ್ರಕಾರ ಈ ಇಬ್ಬರಲ್ಲಿ ಯಾರ ಮೇಲೆ ಆಕ್ರಮಣವಾದರೂ ಮತ್ತೊಬ್ಬರು ನೆರವಿಗೆ ಧಾವಿಸಬೇಕು. ಈಗ ಸೌದಿ ಅರೇಬಿಯಾದ ಪ್ರಮುಖ ನಗರಗಳ ಮೇಲೆ ಇರಾನ್ ದಾಳಿ ಎಸಗುತ್ತಿರುವುದರಿಂದ ಪಾಕಿಸ್ತಾನವು ಒಪ್ಪಂದದ ಕಟ್ಟುಪಾಡುಗಳಿಗೆ ಒಳಗಾಗಬೇಕಾಗಬಹುದು. ಹೀಗಾಗಿ, ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ ಕೊಟ್ಟಿದೆ.

ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ದ್ವಿಪಕ್ಷೀಯ ರಕ್ಷಣಾ ಒಪ್ಪಂದ ಹೊಂದಿದೆ. ಇದು ಇಡೀ ವಿಶ್ವಕ್ಕೆ ಗೊತ್ತಿದೆ. ಒಪ್ಪಂದಕ್ಕೆ ಪಾಕಿಸ್ತಾನ ಕಟ್ಟುಬಿದ್ದಿದೆ. ಈ ಒಪ್ಪಂದವು ಇರಾನ್ ಗಮನಕ್ಕಿರಬೇಕು. ಇರಾನ್​ನ ನಾಯಕತ್ವ ಸ್ಥಾನದಲ್ಲಿರುವ ನಮ್ಮ ಸಹೋದರರಿಗೆ ಇದನ್ನು ನೆನಪಿಸಲು ಇಚ್ಛಿಸುತ್ತೇನೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದರ್ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಮೇಲಿನ ದ್ವೇಷದಿಂದ ಭಾರತ, ಇರಾನ್, ಅಫ್ಘಾನ್ ಒಂದಾಗಿ ಸಂಚು; ಖವಾಜಾ ಆಸಿಫ್ ಆರೋಪ

ಸೌದಿ ಅರೇಬಿಯಾದಲ್ಲಿ ಇಸ್ಲಾಮ್ ಧರ್ಮದ ಆತ್ಮ ಇದೆ. ಮೆಕ್ಕಾ ಮಸೀದಿ ಮತ್ತು ಮದೀನಾದಲ್ಲಿ ಪ್ರವಾದಿಗಳ ಮಸೀದಿ ಇರುವುದು ಸೌದಿಯಲ್ಲೇ. ಇಸ್ಲಾಮ್ ಧರ್ಮ ಹುಟ್ಟಿದ್ದೂ ಇಲ್ಲೇ. ತನಗೆ ಈ ಧಾರ್ಮಿಕ ಸ್ಥಳದ ರಕ್ಷಣೆಯೇ ಮೊದಲ ಆದ್ಯತೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಪ್ರತಿಯೊಂದು ವೇದಿಕೆಯಲ್ಲೂ, ಪ್ರತಿಯೊಂದು ಕ್ಷೇತ್ರದಲ್ಲೂ ಸೌದಿ ಅರೇಬಿಯಾಗೆ ಬೆಂಬಲವಾಗಿ ನಿಂತಿದ್ದೇವೆ ಎಂದೂ ಪಾಕಿಸ್ತಾನ ಹೇಳುತ್ತಿದೆ.

ಪಾಕಿಸ್ತಾನದ ವಿರುದ್ಧ ಭಾರತ, ಅಫ್ಗಾನ್ ಮತ್ತು ಇರಾನ್ ಅನ್ನು ಛೂಬಿಡುವ ಪಿತೂರಿ: ಖವಾಜ ಆಸಿಫ್

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜ ಆಸಿಫ್ ಸ್ಫೋಟಕ ಆರೋಪವೊಂದನ್ನು ಮಾಡಿದ್ದಾರೆ. ಇರಾನ್​ನಲ್ಲಿ ಆಡಳಿತ ಬದಲಾವಣೆ ಮಾಡುತ್ತಿರುವುದು ಪಾಕಿಸ್ತಾನವನ್ನು ಸಾಮಂತ ನಾಡನ್ನಾಗಿ ಮಾಡಲು ಝಯೋನಿಸ್ಟರು (ಇಸ್ರೇಲಿಗರು) ಮಾಡಿರುವ ಪಿತೂರಿ ಎಂದು ಸಚಿವರು ಆಪಾದಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಮಾರ್ಗದಲ್ಲಿ ಚೀನಾಗೆ ಮಾತ್ರ ಅವಕಾಶ ಎಂದ ಇರಾನ್; ಭಾರತಕ್ಕೆ ನಾವು ತೈಲ ಕೊಡುತ್ತೇವೆ ಎಂದ ರಷ್ಯಾ

ಇರಾನ್​ನಲ್ಲಿ ಆಡಳಿತ ಬದಲಾದರೆ ಇರಾನ್, ಅಫ್ಗಾನಿಸ್ತಾನ್ ಮತ್ತು ಭಾರತದ ಮೂಲಕ ಪಾಕಿಸ್ತಾನಕ್ಕೆ ತೊಂದರೆ ಕೊಡುವ ಸಂಚು ನಡೆದಿದೆ. ಪಾಕಿಸ್ತಾನದ 25 ಕೋಟಿ ಜನರು ಈ ವಿಚಾರವನ್ನು ಅರ್ಥ ಮಾಡಿಕೊಳ್ಳಬೇಕು. ಶತ್ರುಗಳ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಆಸಿಫ್ ಖವಾಜ ಕರೆ ನೀಡಿದ್ದಾರೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *