Ishaq Dar Video: ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್

Ishaq Dar Video: ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್

ಇಸ್ಲಾಮಾಬಾದ್, ಮಾರ್ಚ್​ 30: ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಈಜಿಪ್ಟ್​ ವಿದೇಶಾಂಗ ಸಚಿವರನ್ನು ಸ್ವಾಗತಿಸುವಾಗ ಕಾಲು ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ತಕ್ಷಣ ಅವರನ್ನು ಮೇಲಕ್ಕೆತ್ತಲು ಸಹಾಯ ಮಾಡಿದರು. ಅದೃಷ್ಟವಶಾತ್, ಅವರು ಬಿದ್ದಿದ್ದರಿಂದ ಯಾವುದೇ ಗಂಭೀರ ಗಾಯಗಳಾಗಿಲ್ಲ.

ಇರಾನ್-ಇಸ್ರೇಲ್-ಅಮೆರಿಕದ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಕಡಿಮೆ ಮಾಡಲು ತಾವು ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಪಾಕಿಸ್ತಾನ ಮುಂದೆ ಬಂದಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿ, ಇಶಾಕ್ ದಾರ್ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಅವರು ಪ್ರಸ್ತುತ ಈಜಿಪ್ಟ್, ಟರ್ಕಿ ಮತ್ತು ಸೌದಿ ಅರೇಬಿಯಾದ ನಾಯಕರೊಂದಿಗೆ ಪ್ರಮುಖ ಚರ್ಚೆಗಳನ್ನು ನಡೆಸುತ್ತಿದ್ದಾರೆ.

ಹಾರ್ಮುಜ್ ಜಲಸಂಧಿಯ ಮೂಲಕ ಪಾಕಿಸ್ತಾನ ಧ್ವಜ ಹೊಂದಿರುವ 20 ಹೆಚ್ಚುವರಿ ಹಡಗುಗಳಿಗೆ ಸಾಗಣೆಗೆ ಇರಾನ್ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಒಪ್ಪಂದದ ಪ್ರಕಾರ, ಈಗ ಪ್ರತಿದಿನ ಎರಡು ಹಡಗುಗಳು ಈ ಮಾರ್ಗದಲ್ಲಿ ಸಾಗಲು ಸಾಧ್ಯವಾಗುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Leave a Reply

Your email address will not be published. Required fields are marked *