Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್? ಇಲ್ಲಿದೆ ಫಲಿತಾಂಶ ನೋಡುವ ಸುಲಭ ವಿಧಾನ

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್? ಇಲ್ಲಿದೆ ಫಲಿತಾಂಶ ನೋಡುವ ಸುಲಭ ವಿಧಾನ

ಬೆಂಗಳೂರು, ಏ.6: ಭಾರೀ ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ದಿನ ಬಂದಿದೆ, ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.

ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ ಗೊಂದಲಗಳು ವಿದ್ಯಾರ್ಥಿಗಳಿಗೆ ಇರಬಹುದು. ಅದಕ್ಕೆ ಭಯಬೇಡ, ಇಲ್ಲಿ ನೀಡಿರುವ ಲಿಂಕ್​​​ಗಳನ್ನು ಓಪನ್​ ಮಾಡಿ ನೋಡಿದ್ರೆ ಸಾಕು. karresults.nic.in ಮತ್ತು kseab.karnataka.gov.in ಅನ್ನು ಶಿಕ್ಷಣ ಇಲಾಖೆ ನೀಡಿದೆ. ಒಂದು ವೇಳೆ ಈ ಲಿಂಕ್​​ಗಳಲ್ಲಿ ದೋಷ ಬಂದರೆ, ಇನ್ನು ಆಯ್ಕೆಯನ್ನು ಕೂಡ ನೀಡಲಾಗಿದೆ. PUC ಫಲಿತಾಂಶಗಳನ್ನು ಡಿಜಿಲಾಕರ್ ವೆಬ್‌ಸೈಟ್ – digilocker.gov.in ನಲ್ಲಿಯೂ ಪರಿಶೀಲಿಸಲು ಅವಕಾಶವನ್ನು ನೀಡಲಾಗಿದೆ.

ಕಳೆದ ವರ್ಷ ಏಪ್ರಿಲ್ 8 ರಂದು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಘೋಷಿಸಲಾಯಿತು, ಪರೀಕ್ಷೆಗಳು ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿತ್ತು. ಈ ಬಾರಿಯೂ ಅದೇ ಸಮಯದಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪಿಯುಸಿ ಫಲಿತಾಂಶ 2026: ಪರಿಶೀಲಿಸುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಅನ್ನು ಡೌನ್‌ಲೋಡ್ ಮಾಡಲು ಈ ಹಂತಗಳನ್ನು ಅನುಸರಿಸಬಹುದು :

ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ಒಂದು ವೇಳೆ ನಿಮಗೆ ಫಲಿತಾಂಶ ಕಾಪಿ ಬೇಕಂದರೆ ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಇದನ್ನೂ ಓದಿ: SSLC ತೃತೀಯ ಭಾಷೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ

ಡಿಜಿಲಾಕರ್‌ನಲ್ಲಿಯೂ ಪಿಯುಸಿ ಫಲಿತಾಂಶ ನೋಡಬಹುದು:

ಡಿಜಿಲಾಕರ್ ವೆಬ್‌ಸೈಟ್ – digilocker.gov.in ನಲ್ಲಿ 12 ನೇ ತರಗತಿ ಕರ್ನಾಟಕ ಪಿಯುಸಿ ಫಲಿತಾಂಶಗಳು ಲಭ್ಯವಾಗಲಿದೆ.

ಏಪ್ರಿಲ್ 3 ರಂದು ಡಿಜಿಲಾಕರ್ ಪೋಸ್ಟ್‌ನಲ್ಲಿ ಹೀಗೆ ಹೇಳಲಾಗಿದೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ, 2026ನೇ ತರಗತಿಯ ದ್ವಿತೀಯ ಪಿಯುಸಿ ಫಲಿತಾಂಶಗಳು ಶೀಘ್ರದಲ್ಲೇ ಡಿಜಿಲಾಕರ್‌ನಲ್ಲಿ ಲಭ್ಯವಿರುತ್ತವೆ.

ಇಲ್ಲಿ ಯಾವುದಕ್ಕೂ ಕಾಯುವುದು ಬೇಡ ಹಾಗೂ ಇದಕ್ಕೆ ಹೆಚ್ಚಿನ ದಾಖಲೆಗಳು ಕೂಡ ಬೇಡ. ಸುಲಭವಾಗಿ ಹಾಗೂ ಸುರಕ್ಷಿತವಾಗಿ ಫಲಿತಾಂಶವನ್ನು ನೀಡಬಹುದು. ನಿಮ್ಮ ಫಲಿತಾಂಶಗಳನ್ನು digilocker.gov.in ನಲ್ಲಿ ತಕ್ಷಣವೇ ಪರಿಶೀಲಿಸಲು ಸಿದ್ಧರಾಗಿರಿ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ.

ಇದರಲ್ಲಿ ಬರುವ ಫಲಿತಾಂಶವು ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ, ವಿಷಯಗಳ ಹೆಸರುಗಳು ಮತ್ತು ಪ್ರತಿ ವಿಷಯದಲ್ಲಿ ಪಡೆದ ಅಂಕಗಳಂತಹ ಪ್ರಮುಖ ವಿವರಗಳನ್ನು ಒಳಗೊಂಡಿರುತ್ತದೆ. ಇದು ಒಟ್ಟು ಅಂಕಗಳು ಮತ್ತು ಒಟ್ಟಾರೆ ಫಲಿತಾಂಶದ ಸ್ಥಿತಿಯನ್ನು ಸಹ ತೋರಿಸುತ್ತದೆ, ಪರೀಕ್ಷೆಯಲ್ಲಿ ಅಭ್ಯರ್ಥಿಯ ಕಾರ್ಯಕ್ಷಮತೆಯ ಸಂಪೂರ್ಣ ಅವಲೋಕನವನ್ನು ಒದಗಿಸುತ್ತದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *