Karnataka Budget 2026-27 LIVE News Updates in Kannada: ಬೆಂಗಳೂರು, ಮಾರ್ಚ್ 06: ಇಂದು ಎಲ್ಲರ ಚಿತ್ತ ಕರ್ನಾಟಕ ಬಜೆಟ್(Karnataka Budget) ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ನಾಲ್ಕೂವರೆ ಲಕ್ಷ ಕೋಟಿ ರೂ.ತಲುಪುವ ನಿರೀಕ್ಷೆ ಇದೆ. 2025ರಲ್ಲಿ ಆದಾಯ ಸಂಗ್ರಹದ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗದ ಕಾರಣ 2026-27ನೇ ಸಾಲಿನ ಬಜೆಟ್ ಮೇಲೆ ಅದರ ಪರಿಣಾಮ ಗೋಚರಿಸುವ ಸಾಧ್ಯತೆಗಳಿವೆ.
1995-96ರಲ್ಲಿ ಮೊದಲ ಮುಂಗಡಪತ್ರ ಮಂಡಿಸಿದ್ದ ಸಿದ್ದರಾಮಯ್ಯ ಕಳೆದ 30 ವರ್ಷಗಳಲ್ಲಿ ಇದೀಗ 17 ಬಜೆಟ್ ಮಂಡಿಸಲಿದ್ದಾರೆ. 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನೂ ಹೊಂದಿದ್ದರು. ಆ ಅವಧಿಯ ಎಲ್ಲಾ ಬಜೆಟ್‌ಗಳನ್ನ ಅವರೇ ಮಂಡಿಸಿದ್ದರು. ಎರಡನೇ ಅವಧಿ ಮುಖ್ಯಮಂತ್ರಿಯಾದ ಬಳಿಕ ಈವರೆಗೂ ಮೂರು ಬಾರಿ ಬಜೆಟ್ ಮಂಡಿಸಿದ್ದು, 4ನೇ ಬಜೆಟ್ ಮಂಡನೆಗೆ ಈಗ ಸಿದ್ಧವಾಗಿದ್ದಾರೆ.
2026ರ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಮೀಸಲಿಡಬಹುದು, ಪಂಜಾಬ್ ಮಾದರಿಯಲ್ಲಿ ರೈತರ ಓಡಾಟಕ್ಕೆ ಟೋಲ್ ಫ್ರೀ ವ್ಯವಸ್ಥೆ, ನಗರಗಳ ಅಭಿವೃದ್ಧಿಗೆ ಮೆಗಾಸಿಟಿ ಯೋಜನೆ ಘೋಷಣೆ ಸಾಧ್ಯತೆ, ಟನಲ್ ರೋಡ್ ಹಾಗೂ ಡಬಲ್ ಡೆಕ್ಕರ್ ರೋಡ್ ಯೋಜನೆ ವಿಸ್ತರಣೆ, ರೈತರ ಎಲ್ಲಾ ಬೆಳೆಗಳಿಗೆ ವಿಶೇಷ ವಿಮಾ ಯೋಜನೆ ಘೋಷಣೆ ಸಾಧ್ಯತೆ ಇದೆ.
ಮತ್ತಷ್ಟು ಓದಿ: Karnataka Budget 2026: ಸಿದ್ದರಾಮಯ್ಯ ದಾಖಲೆ ಬಜೆಟ್ ಎಷ್ಟು ಗಂಟೆಗೆ? ಲೈವ್ ನೋಡುವುದ್ಹೇಗೆ?
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಶಸ್ಸು ಸಿಕ್ಕಿದೆ ಎನ್ನುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದೆ ಎನ್ನುವ ವಿಚಾರಗಳೂ ಜನರ ಬಾಯಲ್ಲಿ ಕೇಳಿಬರುತ್ತಿದೆ. ಸಿದ್ದರಾಮಯ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ಕೊಡುವ ಸಾಧ್ಯತೆ ಇದೆ. ಪ್ರಸ್ತುತ ಬಜೆಟ್ನಲ್ಲಿ ಸಿದ್ದರಾಮಯ್ಯ ಅಬಕಾರಿ ಸೆಸ್, ಇಂಧನ ಸೆಸ್ ಹೆಚ್ಚಿಸುವ ಸಾಧ್ಯತೆಗಳೂ ಇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ರಲ್ಲಿ ಒಟ್ಟು 3.71 ಲಕ್ಷ ಕೋಟಿ ರೂ. ಗಾತ್ರದ ಹಾಗೂ 2025-2026ರಲ್ಲಿ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಯಾವೆಲ್ಲಾ ಘೋಷಣೆಗಳನ್ನು ಮಾಡಲಿದ್ದಾರೆ, ಯಾವುದೆಲ್ಲಾ ದುಬಾರಿಯಾಗಲಿವೆ, ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಹಣ ಸಿಗಲಿದೆ ಎಂಬುದರ ಕುರಿತ ಬಜೆಟ್ನ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಕನ್ನಡ ವೆಬ್ಸೈಟ್ನಲ್ಲಿ ವೀಕ್ಷಿಸಿ.
ಕರ್ನಾಟಕದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
