ಭರ್ತಿಯ ಹಾದಿಯಲ್ಲಿ ಕಬಿನಿ, ಆಲಮಟ್ಟಿ ಡ್ಯಾಂ
ಬೆಂಗಳೂರು, ಆಗಸ್ಟ್ 10: ಕರ್ನಾಟಕದ ವಿವಿಧ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು (Dam water level) ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಕೃಷ್ಣಾ ನದಿಯಿಂದ ದಾಖಲೆ ಪ್ರಮಾಣದ ನೀರು ಹರಿದುಬರುತ್ತಿದ್ದು, ಇತ್ತ ಮೈಸೂರಿನ ಕಬಿನಿ ಜಲಾಶಯ ಭರ್ತಿಯಾಗಲು ಕೇವಲ ಒಂದೇ ಅಡಿ ಬಾಕಿಯಿದೆ. ಕಾವೇರಿ ಕೊಳ್ಳದ ಕೆಆರ್‌ಎಸ್ ಡ್ಯಾಂನಲ್ಲೂ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಉತ್ತಮಗೊಳ್ಳುತ್ತಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.
1. ಆಲಮಟ್ಟಿ ಜಲಾಶಯ
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂ ಗರಿಷ್ಠ ಮಟ್ಟಕ್ಕೆ ತಲುಪುತ್ತಿದ್ದು, ಕೃಷ್ಣಾ ನದಿಯಿಂದ ಭಾರಿ ಪ್ರಮಾಣದ ಒಳಹರಿವು ಮುಂದುವರಿದಿದೆ.
- ಗರಿಷ್ಠ ಮಟ್ಟ: 519.60 ಮೀಟರ್
- ಇಂದಿನ ನೀರಿನ ಮಟ್ಟ: 519.42 ಮೀಟರ್
- ಒಳಹರಿವು: 89,777 ಕ್ಯೂಸೆಕ್
- ಹೊರಹರಿವು: 41,155 ಕ್ಯೂಸೆಕ್
2. ಕೆಆರ್‌ಎಸ್ ಜಲಾಶಯ
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಒಳಹರಿವು ಸ್ಥಿರವಾಗಿದ್ದು, ಇಂದಿನ ನೀರಿನ ಸಂಗ್ರಹ 30 ಟಿಎಂಸಿ ದಾಟಿದೆ.
- ಗರಿಷ್ಠ ಮಟ್ಟ: 124.80 ಅಡಿ
- ಇಂದಿನ ಮಟ್ಟ: 108.66 ಅಡಿ
- ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
- ಇಂದಿನ ಸಂಗ್ರಹ: 30.396 ಟಿಎಂಸಿ
- ಒಳಹರಿವು: 11,857 ಕ್ಯೂಸೆಕ್
- ಹೊರಹರಿವು: 2,335 ಕ್ಯೂಸೆಕ್
3. ಕಬಿನಿ ಜಲಾಶಯ
- ಗರಿಷ್ಠ ಮಟ್ಟ: 84 ಅಡಿ
- ಇಂದಿನ ನೀರಿನ ಮಟ್ಟ: 83.04 ಅಡಿ
- ಗರಿಷ್ಠ ಸಂಗ್ರಹ ಸಾಮರ್ಥ್ಯ: 19.52 ಟಿಎಂಸಿ
- ಇಂದಿನ ಸಂಗ್ರಹ: 18.89 ಟಿಎಂಸಿ
- ಒಳಹರಿವು: 12,044 ಕ್ಯೂಸೆಕ್
- ಒಟ್ಟು ಹೊರಹರಿವು: 12,000 ಕ್ಯೂಸೆಕ್ (ಕಾಲುವೆಗಳಿಗೆ ನೀರು ಸ್ಥಗಿತ)
ಮೈಸೂರಿನ ಕಬಿನಿ ಜಲಾನಯನ ಪ್ರದೇಶದಲ್ಲಿ 10 ಮಿ.ಮೀ ಮಳೆಯಾಗಿದ್ದು, ಜಲಾಶಯವು ಸಂಪೂರ್ಣವಾಗಿ ಭರ್ತಿಯಾಗಲು ಕೇವಲ 0.96 ಅಡಿ ಮಾತ್ರ ಬಾಕಿಯಿದೆ. ಸುರಕ್ಷತೆಯ ದೃಷ್ಟಿಯಿಂದ ನದಿಗೆ ಭಾರಿ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
