ಬೆಂಗಳೂರು, ಏ.22: ಕರ್ನಾಟಕದ 10ನೇ ತರಗತಿ (SSLC) ವಿದ್ಯಾರ್ಥಿಗಳ ಫಲತಾಂಶ ಕಾಯುವಿಕೆ ಶೀಘ್ರದಲ್ಲೇ ಅಂತ್ಯಗೊಳ್ಳಲಿದೆ. ನಾಳೆ ಅಥವಾ ನಾಡಿದ್ದು (ಏ.23, 24) ಫಲಿತಾಂಶ ಬರಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವೊಂದು ಮೂಲಗಳ ಪ್ರಕಾರ ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಂಕಪಟ್ಟಿಯನ್ನು ಪಡೆಯಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ಗೊಂದಲು ಮಾಡಿಕೊಳ್ಳುವುದು ಬೇಡ, ಫಲಿತಾಂಶ ಈ ವಾರದಲ್ಲಿ ಅಥವಾ ಮುಂದಿನ ತಿಂಗಳು ಬಂದರು ಎಲ್ಲದಕ್ಕೂ ಸಿದ್ಧರಾಗಿರುವುದು ಒಳ್ಳೆಯದು.
ಫಲಿತಾಂಶ ಯಾವಾಗ?
ಕಳೆದ ಎರಡು ವರ್ಷಗಳ (2024 ಮತ್ತು 2025) ಅಂಕಿಅಂಶಗಳನ್ನು ಗಮನಿಸಿದರೆ, ಫಲಿತಾಂಶವು ಮೇ 9ರ ಸುಮಾರಿಗೆ ಪ್ರಕಟವಾಗಿತ್ತು. ಈ ವರ್ಷವೂ ಮಂಡಳಿಯು ಅದೇ ಸಮಯದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಫಲಿತಾಂಶ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಆದರೆ ಈ ಹಿಂದೆ ಏಪ್ರಿಲ್ 23 ಅಥವಾ 24ಕ್ಕೆ ಫಲಿತಾಂಶ ಪ್ರಕಟ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಇನ್ನು ಸ್ಪಷ್ಟ ಮಾಹಿತಿ ಬಂದಿಲ್ಲ ಹಾಗೂ ಇಲಾಖೆ ಕೂಡ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.
ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ಲಿಂಕ್‌ಗಳ ಮೂಲಕ ಫಲಿತಾಂಶ ಚೆಕ್ ಮಾಡಬಹುದು:
karresults.nic.in
kseab.karnataka.gov.in
ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ?
ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ ‘SSLC Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸಿ.
‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ. ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
ಇದನ್ನೂ ಓದಿ: Karnataka CET 2026: ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ
ಡಿಜಿಲಾಕರ್ ಮತ್ತು ಕರ್ನಾಟಕ ಒನ್ ಆಪ್:
ಅಧಿಕೃತ ವೆಬ್‌ಸೈಟ್ ಮಾತ್ರವಲ್ಲದೆ, ವಿದ್ಯಾರ್ಥಿಗಳು DigiLocker ಮೂಲಕವೂ ತಮ್ಮ ಅಂಕಪಟ್ಟಿಯನ್ನು ಪಡೆಯಬಹುದು. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್‌ನಿಂದ KarnatakaOne ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ, ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳುವ ಮೂಲಕವೂ ಫಲಿತಾಂಶ ವೀಕ್ಷಿಸಬಹುದು.
ಈ ಬಾರಿ ಹೊಸ ಬದಲಾವಣೆ:
ಈ ಶೈಕ್ಷಣಿಕ ವರ್ಷದಿಂದ ಕೆಎಸ್‌ಇಎಬಿ (KSEAB) ಮಹತ್ವದ ಬದಲಾವಣೆ ಮಾಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಯಲ್ಲಿ (Third Language) ಶ್ರೇಣಿಗಳ (Grades) ಬದಲು ಅಂಕಗಳನ್ನು (Marks) ನೀಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಬಗ್ಗೆ ಇತ್ಯರ್ಥ ಮಾಡಿದ ಕೋರ್ಟ್ 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ.
ಹೈಕೋರ್ಟ್ ಆದೇಶದಿಂದ ಫಲಿತಾಂಶ ಪ್ರಕಟಣೆಗೆ ಯಾವುದೇ ಅಡ್ಡಿಯಿಲ್ಲ: ಮಧು ಬಂಗಾರಪ್ಪ
ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಕೂಡ ಒಂದು ಹೇಳಿಕೆಯನ್ನು ನೀಡಿದ್ದಾರೆ. ಕೋರ್ಟ್ ಆದೇಶದಿಂದ ಫಲಿತಾಂಶ ಪ್ರಕಟಣೆಗೆ ಯಾವುದೇ ತಾಂತ್ರಿಕ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಹೈಕೋರ್ಟ್ ಆದೇಶದಲ್ಲಿ ಏನಿದೆ ಎಂಬುದನ್ನು ನಾವು ಸಂಪೂರ್ಣವಾಗಿ ಪರಿಶೀಲಿಸಬೇಕಿದೆ. ನ್ಯಾಯಾಲಯವು ಮುಂದಿನ ವರ್ಷದಿಂದ ಈ ಪದ್ಧತಿ ಜಾರಿ ಮಾಡಿ ಎಂದು ಹೇಳಿದೆ. ಆದರೆ, ಈ ವರ್ಷದಿಂದಲೇ ಜಾರಿಯಾಗಿದ್ದರೆ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು” ಎಂದು ಸಚಿವರು ಹೇಳಿದ್ದಾರೆ.
ಹೈಕೋರ್ಟ್ ಆದೇಶ ಬಂದ ತಕ್ಷಣ ಫಲಿತಾಂಶ ವಿಳಂಬವಾಗಬಹುದು ಎಂಬ ಆತಂಕ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮನೆ ಮಾಡಿತ್ತು. ಆದರೆ, “ಫಲಿತಾಂಶ ಪ್ರಕಟಣೆಗೆ ಯಾವುದೇ ಅಡ್ಡಿಯಿಲ್ಲ, ನಿಗದಿತ ಸಮಯಕ್ಕೇ ರಿಸಲ್ಟ್ ಬರಲಿದೆ” ಎಂದು ಸಚಿವರು ಭರವಸೆ ನೀಡಿದ್ದಾರೆ. ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವುದಾಗಿ ಸಚಿವರು ತಿಳಿಸಿದ್ದಾರೆ. ಸಿಎಂ ಅವರೊಂದಿಗೆ ಚರ್ಚಿಸಿ, ಮುಂದಿನ ಕಾನೂನಾತ್ಮಕ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ಪರೀಕ್ಷಾ ಮಂಡಳಿಯು ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಹಂತಗಳನ್ನು ಅನುಸರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
