ಬೆಂಗಳೂರು, ಏ.23: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಗೊಂಡಿದೆ. ಈ ಬಾರಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಹೊರಬರುತ್ತಿರುವ ಮಾಹಿತಿ ಅನ್ವಯ, ರಾಜ್ಯದಲ್ಲಿ ದಾಖಲೆ ಮಟ್ಟದ ಫಲಿತಾಂಶ ಬರುವ ಸಾಧ್ಯತೆ ದಟ್ಟವಾಗಿದೆ. ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣ (Pass Percentage) ಶೇ. 85ಕ್ಕಿಂತ ಹೆಚ್ಚು ಇರಲಿದೆ. ಇದು ಕಳೆದ ಕೆಲವು ವರ್ಷಗಳ ಫಲಿತಾಂಶಕ್ಕೆ ಹೋಲಿಸಿದರೆ ಅತ್ಯುತ್ತಮ ಎನ್ನಲಾಗಿದೆ. ಇದೀಗ ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
