Karnataka Weather Forecast: ಉಡುಪಿ, ಉತ್ತರ ಕನ್ನಡಕ್ಕೆ ರೆಡ್​​ ಅಲರ್ಟ್​​, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ – Kannada News | Karnataka Weather Forecast: Red Alert for Udupi, Uttara Kannada; Orange Alert Issued for Bengaluru and 17 Other Districts

ಬೆಂಗಳೂರು, ಜುಲೈ 06: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವಿಪರೀತ ವರ್ಷಧಾರೆಯಾಗುತ್ತಿದೆ. ಈ ನಡುವೆ ಜುಲೈ 9ರಿಂದ 11ರ ವರೆಗೆ ಕರಾವಳಿಯಲ್ಲಿ, ಜುಲೈ 9ರಂದು ದಕ್ಷಿಣ ಒಳನಾಡು ಭಾಗದಲ್ಲಿ ಮತ್ತು ಜುಲೈ 8ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಪೈಕಿ ಉತ್ತರ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಪರೀತ ಮಳೆಯ ಜೊತೆಗೆ ಗಂಟೆಗೆ 50-60 ಕಿಲೋ ಮೀಟರ್​​ ವೇಗದಲ್ಲಿ ಗಾಳಿಯ ಅಬ್ಬರವೂ ಇರಲಿದೆ ಎಂದು ಇಲಾಖೆ ಎಚ್ಚರಿಸಿದೆ.

ಎರಡು ಜಿಲ್ಲೆಗಳಿಗೆ ನಾಳೆ ರೆಡ್​​ ಅಲರ್ಟ್​​

ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿಗೆ ನಾಳೆ ರೆಡ್​​ ಅಲರ್ಟ್​​ ನೀಡಲಾಗಿದ್ದು, ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯಬ್ಬರದ ನಿರೀಕ್ಷೆ ಇದೆ.

ಇದನ್ನೂ ಓದಿ: ಕಳೆದ 24 ಗಂಟೆಯಲ್ಲಿ ಕರ್ನಾಟಕ ಯಾವ ಭಾಗದಲ್ಲಿ ಅತಿ ಹೆಚ್ಚು ಮಳೆ?

ಕೆಲ ಜಿಲ್ಲೆಗಳಲ್ಲಿ ವಿಪರೀತ ಗಾಳಿ

ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವಿಪರೀತ ಗಾಳಿ ಇರಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿಲೋ ಮೀಟರ್​​ ಇರಬಹುದೆಂದು ಅಂದಾಜಿಸಲಾಗಿದೆ.

ಬೆಂಗಳೂರು ನಗರಕ್ಕೂ ಆರೆಂಜ್​​ ಅಲರ್ಟ್​​

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿರುವ ಬೆಂಗಳೂರು ನಗರದಲ್ಲಿಯೂ ನಾಳೆ ಭಾರಿ ಮಳೆಯ ನಿರೀಕ್ಷೆ ಇದ್ದು, ಆರೆಂಜ್​​ ಅಲರ್ಟ್​​ ನೀಡಲಾಗಿದೆ. ಗಂಟೆಗೆ 30-40 ಕಿಲೋ ಮೀಟರ್​​ ಗಾಳಿಯ ವೇಗದ ಜೊತೆಗೆ ವರುಣಾರ್ಭಟದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *