ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಮಳೆಯಾಯಿತು.Image Credit source: tv9
ಬೆಂಗಳೂರು, ಆಗಸ್ಟ್ 8: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕಾಗಿದ್ದು, ಇಂದು (ಆಗಸ್ಟ್ 8) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ
ಆಗಸ್ಟ್ 8ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಮುಂದಿನ ಅವಧಿಯಲ್ಲೂ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ. ಆಗಸ್ಟ್ 9ರಂದು ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್
#ಮಳೆ #ಮುನ್ನೆಚ್ಚರಿಕೆ : #Heavy #Rainfall (64.5mm to 115.4mm) #warning for Udupi, Dakshina Kannada, Uttara Kannada & Shivamogga, Chikkamagalur & Kodagu Districts. #Yellow #Alert@KarnatakaVarthe #KSNDMC #KarnatakaRains #Monsoon2026 pic.twitter.com/zEGHo6EcI0
— Karnataka State Natural Disaster Monitoring Centre (@KarnatakaSNDMC) August 7, 2026
ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಇದರೊಂದಿಗೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲೂ ಮಳೆ
ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ಇದೆ.
ಆಗಸ್ಟ್ 9ರಂದು ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ತುಸು ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು.
ಕರಾವಳಿಯಲ್ಲಿ ಭಾರಿ ಮಳೆ ದಾಖಲು
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 7 ಸೆಂ.ಮೀ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 7 ಸೆಂ.ಮೀ ಮಳೆ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
