Karnataka Weather Forecast: ಕರಾವಳಿ ಕರ್ನಾಟಕ, ಒಳನಾಡಿನಲ್ಲಿ ಗಾಳಿ ಸಹಿತ ಮಳೆ; ಐಎಂಡಿ ಮುನ್ಸೂಚನೆ – Kannada News | Karnataka Weather Forecast: Moderate Rain in Coastal Districts, Strong Winds Across Interior Regions on July 20 21

ಬೆಂಗಳೂರು ಮಳೆ (ಸಂಗ್ರಹ ಚಿತ್ರ)Image Credit source: tv9

ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ತುಸು ಬಿಡುವು ಪಡೆದಿದ್ದ ಮುಂಗಾರು (Monsoon Rain) ಈಗ ಮತ್ತೆ ಸ್ವಲ್ಪ ಮಟ್ಟಿಗೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ.

ಜುಲೈ 21ಕ್ಕೂ ಕರಾವಳಿ, ಒಳನಾಡಿನಲ್ಲಿ ಮಳೆ ಮುನ್ಸೂಚನೆ

ಜುಲೈ 21ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮಳೆ ಮತ್ತು ಗಾಳಿಯ ಮುನ್ಸೂಚನೆ ನೀಡಲಾಗಿದೆ.

ಸಾರ್ವಜನಿಕರಿಗೆ ಹವಾಮಾನ ಇಲಾಖೆಯ ಸಲಹೆ

  • ಕರಾವಳಿ ಮತ್ತು ಗಿರಿಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಲಾಪಾತಗಳು, ಸಮುದ್ರ ತೀರದ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
  • ಬಲವಾದ ಗಾಳಿ ಬೀಸುವ ಜಿಲ್ಲೆಗಳಲ್ಲಿ ಹಳೆಯ ಮರಗಳು, ತಾತ್ಕಾಲಿಕ ಶೆಡ್‌ಗಳು ಮತ್ತು ಹೋರ್ಡಿಂಗ್‌ಗಳ ಸಮೀಪ ವಾಹನ ನಿಲುಗಡೆ ಮಾಡದಂತೆ ಮನವಿ ಮಾಡಲಾಗಿದೆ.
  • ರೈತರು ಬೆಳೆಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಐಎಂಡಿ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *