ಬೆಂಗಳೂರು, (ಜುಲೈ 25): ಮುಂದಿನ ಏಳು ದಿನಗಳ ಕಾಲ ಕರ್ನಾಟಕದಾದ್ಯಂತ (Karnataka) ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜುಲೈ 28 ರಿಂದ ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಈ ಭಾಗಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 30-40 ಕಿ.ಮೀ ವೇಗ) ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದ ಜನರಿಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.
ಮುಂದಿನ 7ದಿನಗಳ #ಮಳೆ #ಮುನ್ಸೂಚನೆ & #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ & ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜುಲೈ 28 ರಿಂದ ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.#KSNDMC pic.twitter.com/j3vfw0dPEL
— Karnataka State Natural Disaster Monitoring Centre (@KarnatakaSNDMC) July 25, 2026
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಬಿರುಗಾಳಿ ಸಮೇತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿದೆ, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.