ಪ್ರಾತಿನಿಧಿಕ ಚಿತ್ರImage Credit source: India Today
ಬೆಂಗಳೂರು, (ಜುಲೈ 18): ಕರ್ನಾಟಕದಲ್ಲಿ (Karnataka) ಕಳೆದ ಕೆಲವು ದಿನಗಳಿಂದ ಕ್ಷೀಣಿಸಿದ್ದ ಮಳೆ (Rain) ಮತ್ತೆ ಚುರುಕುಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜುಲೈ 18 ಮತ್ತು 19 ರಂದು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜುಲೈ 18 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಪ್ರಮುಖ ಪ್ರಾದೇಶಿಕ ಹವಾಮಾನ ಮುನ್ಸೂಚನೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ ನಿರಂತರವಾಗಿ ಗಾಳಿಯ ವೇಗ (30-40 ಕಿ.ಮೀ.) ಹೆಚ್ಚಿರಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ತುಂಗಾ ತುಂಬಿ ಹರಿಯುತ್ತಿದ್ದರೂ ಶಿವಮೊಗ್ಗದಲ್ಲಿ ನೀರಿಗೆ ಹಾಹಾಕಾರ: ನೀರಿಗಾಗಿ ಜೀವದ ಹಂಗು ತೊರೆದ ಜನರು
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ, ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಜುಲೈ 18 & 19 ರಂದು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜುಲೈ 18 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. pic.twitter.com/qP4WVZiVyp
— Karnataka State Natural Disaster Monitoring Centre (@KarnatakaSNDMC) July 18, 2026
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿಯ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿ.ಮೀ.) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
SOUTH INTERIOR KARNATAKA & MALNAD
Heavy rain with sustained wind (40-50 Kmph) likely to occur at one or two places over Shivamogga, Chikkamagaluru, Hassan, Kodagu districts. Light to moderate rain with sustained wind (40-50 Kmph) likely to occur at a few places over Ballari,— Karnataka State Natural Disaster Monitoring Centre (@KarnatakaSNDMC) July 18, 2026
ಇನ್ನು ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 27°C ರಿಂದ 29°C ಹಾಗೂ ಕನಿಷ್ಠ ತಾಪಮಾನ 21°C ಆಸುಪಾಸಿನಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
