Karnataka Weather Forecast: ದುರ್ಬಲವಾದ ನೈಋತ್ಯ ಮುಂಗಾರು; 12 ಜಿಲ್ಲೆಗಳಿಂದ ಮಳೆ ದೂರ! – Kannada News | Karnataka Weather Forecast: Weak Monsoon Leaves 12 Districts Dry; Moderate Rain Predicted for Coastal and Malnad Regions

ಬೆಂಗಳೂರು, ಜುಲೈ 13: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ವರುಣಾರ್ಭಟ ತೀರಾ ಇಳಿಮುಖವಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಉಷ್ಣತೆ ಪ್ರಮಾಣವೂ ಹೆಚ್ಚತೊಡಗಿದೆ. ಹೀಗಿದ್ದರೂ ನಾಳೆ (ಜುಲೈ 14) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಗೆಯೇ, ಉತ್ತರ ಒಳನಾಡು ಕರ್ನಾಟಕದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದರೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆಯೂ ವರ್ಷಧಾರೆಯ ಸಾಧ್ಯತೆ ಇದೆ ಎನ್ನಲಾಗಿದೆ.  ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಡೆ 30–40 ಕಿ.ಮೀ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಬಗ್ಗೆ ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ:  ಕರ್ನಾಟಕದ ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ, ಬಿರುಗಾಳಿ ಸಾಧ್ಯತೆ; ಐಎಂಡಿ ಎಚ್ಚರಿಕೆ

12 ಜಿಲ್ಲೆಗಳಿಂದ ಮಳೆ ದೂರ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಐಕಳದಲ್ಲಿ ನಿನ್ನೆ ರಾಜ್ಯದಲ್ಲೇ ಅತಿ ಹೆಚ್ಚು, ಅಂದರೆ 26.5 ಮಿ.ಮೀ. ಮಳೆಯಾಗಿದೆ. ಉಳಿದಂತೆ ಕೊಡಗಿನ ಪೊನ್ನಂಪೇಟೆಯ ಮಾಯಮುಡಿಯಲ್ಲಿ 11 ಮಿ.ಮೀ ಮತ್ತು ದಾವಣಗೆರೆಯ ಹೊನ್ನಾಳಿಯ ಹತ್ತೂರಿನಲ್ಲಿ 10.5 ಮಿ.ಮೀ. ವರ್ಷಧಾರೆಯಾಗಿದೆ. ಬಾಗಲಕೋಟೆ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ವಿಜಯನಗರ, ಗದಗ, ಬೆಂಗಳೂರು ನಗರ, ರಾಮನಗರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯೇ ಆಗಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *