Karnataka Weather Forecast: ಬೆಂಗಳೂರಿನಲ್ಲಿಂದು ಭಾರೀ ಮಳೆ! 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮೇ 31: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Weather) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ.

ಮುಖ್ಯಾಂಶಗಳು

  • ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
  • ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 40-50 ಕಿಮೀ ವೇಗದ ಬಿರುಗಾಳಿ ಸಹಿತ ಮಳೆಯಾಗಲಿದೆ.
  • ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಹಗುರ ಮ ಮುನ್ಸೂಚನೆ.

ಭಾರಿ ಮಳೆಯ ಮುನ್ನೆಚ್ಚರಿಕೆ

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಿರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಇದರೊಂದಿಗೆ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಗಾಳಿ ಸಹಿತ ಸಾಧಾರಣ ಜಿಟಿಜಿಟಿ ಮಳೆಯಾಗಬಹುದು.

ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳ ಸ್ಥಿತಿ

ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಗುರವಾದ ಮಳೆಯಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಹಾವೇರಿ, ಗದಗ, ಕೊಪ್ಪಳ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾರ್ವಜನಿಕರಿಗೆ ಸೂಚನೆ

ಬಿರುಗಾಳಿ ಮತ್ತು ಗುಡುಗು ಮುನ್ಸೂಚನೆ ಇರುವುದರಿಂದ ಮರದ ಕೆಳಗೆ ಅಥವಾ ದುರ್ಬಲ ಕಟ್ಟಡಗಳ ಬಳಿ ಆಶ್ರಯ ಪಡೆಯಬೇಡಿ. ವಾಹನ ಸವಾರರು ಜಾಗರೂಕರಾಗಿರಲು ಹವಾಮಾನ ಇಲಾಖೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *