Headlines

Karnataka Weather Forecast: ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಮೇ 28: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
  • ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಎಲ್ಲೆಲ್ಲಿ ಮಳೆ?

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ವಿಜಯಾಪುರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಗಾಳಿ (ಗಂಟೆಗೆ 50-60 ಕಿ.ಮೀ) ಸಹಿತ ಮಳೆಯಾಗಲಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆ ಮುನ್ಸೂಚನೆ ಇದೆ.

ಅಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಜಿಟಿಜಿಟಿ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಮತ್ತು ರೈತರು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *