Karnataka Weather Forecast: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ, ಯೆಲ್ಲೋ-ಆರೇಂಜ್ ಅಲರ್ಟ್ – Kannada News | Heavy pre monsoon rains lash In Karnataka till May 22. The IMD has issued yellow and orange alerts for several districts.

ಬೆಂಗಳೂರು, (ಮೇ 20): ನೈಋತ್ಯ ಮುಂಗಾರು (Monsoon) ಇದೇ ಮೇ 26ಕ್ಕೆ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕರ್ನಾಟಕದಲ್ಲೂ ಮಳೆಯಾಗಲಿದೆ (Karnataka Rains) ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಆದ್ರೆ, ಅದಕ್ಕೂ ಮುನ್ನ ಅಂದರೆ  ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಇಂದಿನಿಂದ (ಮೇ 20)  ಮೇ 22ರವರೆಗೆ  ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಗಾಳಿ (ಗಂಟೆಗೆ 50-60 ಕಿ.ಮೀ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಮುಖ್ಯಾಂಶಗಳು

  • ಇದೇ ಮೇ 26ಕ್ಕೆ ಕೇರಳಕ್ಕೆ ಮುಂಗಾರು ಆಗಮಿಸುವ ಸಾಧ್ಯತೆ ಎಂದ ಐಎಂಡಿ
  • ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ
  • ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ-ಆರೇಂಜ್ ಅಲರ್ಟ್
  • ಕರಾವಳಿಯಲ್ಲಿ ಗಾಳಿ ಸಮೇತ ಮಳೆ

ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ-ಆರೇಂಜ್ ಅಲರ್ಟ್

ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು (ಮೇ20) ಮತ್ತು ಮೇ 21ರಂದು ವೇಳೆಗೆ ಗುಡುಗು ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ (Yellow Alert) ನೀಡಲಾಗಿದೆ.

ಉತ್ತರ ಒಳನಾಡು

ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ತಾಪಮಾನವು ಗರಿಷ್ಠ 39°C ನಿಂದ 42°C ವರೆಗೆ ಇರಲಿದ್ದು, ಒಣಹವೆ ಮುಂದುವರಿಯಲಿದೆ. ಆದರೆ ಸಂಜೆ ವೇಳೆ ತಂಪಾದ ಗಾಳಿ ಅಥವಾ ಹಗುರ ಮುಂಗಾರು ಪೂರ್ವ ಮಳೆಯಾಗಬಹುದು.

ಕರಾವಳಿಯಲ್ಲಿ ಗಾಳಿ ಸಮೇತ ಮಳೆ

ಮೇ 20 ಮತ್ತು 21ರ ವರೆಗೆ ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು 22 ರಿಂದ 24ರವರೆಗೆ ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *