ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ವರುಣನ ಆರ್ಭಟ ಜೋರು!
ಬೆಂಗಳೂರು, ಜುಲೈ 05: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಿದೆ. ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Weather) ಮುನ್ಸೂಚನೆ ಇದೆ. ಹೀಗಾಗಿ ಮುಂದಿನ ಮೂರು ದಿನಗಳ ಕಾಲ ರೆಡ್ ಅಲರ್ಟ್ ಸೂಚಿಸಲಾಗಿದೆ.
ಎಲ್ಲೆಲ್ಲಿ ಅಲರ್ಟ್ಸ್?
- ಯೆಲ್ಲೋ ಅಲರ್ಟ್: ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ್ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- ಆರೆಂಜ್ ಅಲರ್ಟ್: ಮಲೆನಾಡು ಮತ್ತು ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
- ರೆಡ್ ಅಲರ್ಟ್ (ಜುಲೈ 6, 7 ಮತ್ತು 8): ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 6 ರಿಂದ 8 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿಯಲ್ಲಿ ವರುಣಾರ್ಭಟ
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕಲ್ಯಾಣ ಕರ್ನಾಟಕದಲ್ಲಿ ಸಾಧಾರಣ ಮಳೆ
ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೊಂದಿಗೆ 40-50 ಕಿ.ಮೀ ವೇಗದ ಗಾಳಿ ಬೀಸಲಿದೆ. ಬಾಗಲಕೋಟೆ, ಬಿದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಪರಿಸ್ಥಿತಿ ಏನು?
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On – 7:40 am, Sun, 5 July 26