Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಎಲ್ಲೆಲ್ಲಿ ವರುಣಾರ್ಭಟ? – Kannada News

ಬೆಂಗಳೂರು, ಜೂನ್​​ 09: ಕರ್ನಾಟಕದ ಹಲವು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡು ಭಾಗದ ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮುಖ್ಯಾಂಶಗಳು

  • ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
  • ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಲ್ಲಿ ತೀವ್ರ ಮಳೆ
  • ಉತ್ತರ ಒಳನಾಡು ಭಾಗದ ಹಲವೆಡೆಯೂ ವರುಣಾರ್ಭಟ ಸಾಧ್ಯತೆ

ನಾಳೆ ಎರಡು ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್​​

ಕರಾವಳಿ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯ ನಿರೀಕ್ಷೆ ಹಿನ್ನೆಲೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 10 ಮತ್ತು 11ರಂದು ಹಾಗೆಯೇ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್​​ 10 ಮತ್ತು ಉತ್ತರ ಒಳನಾಡು ಭಾಗದಲ್ಲಿ ಜೂನ್​​ 11ರ ವರೆಗೆ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ:  ಬೈಲಹೊಂಗಲದಲ್ಲಿ ವರುಣಾರ್ಭಟ; ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?

ಬೀದರ್​​, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆ ಮಳೆಯನ್ನು ಅಂದಾಜಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *