Karnataka Weather Forecast: ರಾಜ್ಯದ ಹಲವೆಡೆ ವರುಣನ ಅಬ್ಬರ, ವಿವಿಧ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ! – Kannada News

ರಾಜ್ಯದ ಹಲವೆಡೆ ವರುಣನ ಅಬ್ಬರImage Credit source: telugu.hindustantimes.com

ಬೆಂಗಳೂರು, ಜೂನ್ 05: ರಾಜ್ಯದಲ್ಲಿ ಮುಂಗಾರು (Weather)ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಪ್ರಬಲ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಜಾರಿಗೊಳಿಸಿದೆ.

ಮುಖ್ಯಾಂಶಗಳು

  • ಕರ್ನಾಟಕದ ಏಳು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ.
  • ಕರಾವಳಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆ ಮುನ್ಸೂಚನೆ; ಮೀನುಗಾರರಿಗೆ ಎಚ್ಚರಿಕೆ.
  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆ.

ಕರಾವಳಿಯಲ್ಲಿ ವರುಣನ ಅಬ್ಬರ!

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ (115.6mm ನಿಂದ 204.4mm ವರೆಗೆ) ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಬಿರುಗಾಳಿ ಸಹಿತ ಮಳೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ ಮತ್ತು ವಿಜಯಾಪುರ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದ್ದು, ಇಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಇದರೊಂದಿಗೆ ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಇನ್ನುಳಿದಂತೆ ಬಿದರ್, ಹಾವೇರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *