ಪ್ರಾತಿನಿಧಿಕ ಚಿತ್ರImage Credit source: tv9 kannada
ಬೆಂಗಳೂರು, ಆಗಸ್ಟ್ 08: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ (rain) ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ನಾಳೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 64.5 ಮಿಮೀನಿಂದ 115.4 ಮಿಮೀ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಎಸ್ಎನ್ಡಿಎಂಸಿ ಟ್ವೀಟ್
#ಮಳೆ #ಮುನ್ನೆಚ್ಚರಿಕೆ : #Heavy #Rainfall (64.5mm to 115.4mm) #warning for Udupi, Dakshina Kannada, Uttara Kannada & Shivamogga, Chikkamagalur & Kodagu Districts. #Yellow #Alert@KarnatakaVarthe #KSNDMC #KarnatakaRains #Monsoon2026 pic.twitter.com/v0xmEfDWaK
— Karnataka State Natural Disaster Monitoring Centre (@KarnatakaSNDMC) August 8, 2026
ಧಾರಾಕಾರ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆ ಸಾರ್ವಜನಿಕರು ಹಾಗೂ ಕರಾವಳಿ, ಮಲೆನಾಡು ಭಾಗದ ನಿವಾಸಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಬೆಂಗಳೂರಿನಲ್ಲಿ ಮೂರು ದಿನ ಮಳೆ ಸಾಧ್ಯತೆ
ಇನ್ನು ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ವರುಣನ ಆಗಮನವಾಗಿದ್ದು, ನಗರದಾದ್ಯಂತ ಜಿಟಿ ಜಿಟಿ ಮಳೆ ಸುರಿದಿದೆ. ನಗರದ ಮಲ್ಲೇಶ್ವರಂ, ಮೆಜಸ್ಟಿಕ್, ಕಾರ್ಪೊರೇಷನ್ ಸರ್ಕಲ್, ಟೌನ್ ಹಾಲ್, ವಸಂತ ನಗರ, ಜಯನಗರ, ಶಿವಾಜಿನಗರ, ವಿಜಯನಗರ ಹಾಗೂ ಬಸವೇಶ್ವರ ನಗರ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಸಾಧಾರಣ ಮಳೆ ಸುರಿದಿದ್ದು, ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ, 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಹವಾಮಾನ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಇಂದಿನಿಂದ ಇನ್ನು ಮೂರು ದಿನಗಳ ಕಾಲ ಇದೇ ರೀತಿ ಜಿಟಿ ಜಿಟಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಸಂಜೆ ವೇಳೆಗೆ ಮಳೆ ಆರಂಭವಾಗಿರುವುದರಿಂದ ಕಚೇರಿಗಳಿಂದ ಮನೆಗೆ ಮರಳುವ ಉದ್ಯೋಗಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
