Headlines

Karnataka Weather Forecast: ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ – Kannada News | Karnataka Weather Update: Depression Triggers Heavy Rain Warning; Orange Alert Issued for 6 Districts

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆImage Credit source: PTI

ಬೆಂಗಳೂರು, ಜುಲೈ 31: ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕರಾವಳಿ ಭಾಗ ಸೇರಿ ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ವರ್ಷಧಾರೆಯಾಗಲಿದೆ. ಕೊಡುಗು, ಮೈಸೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಫೆಸಿಪಿಕ್ ಸಾಗರದಲ್ಲಿ ಉಷ್ಣಾಂಶ ಹೆಚ್ಚಳವಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಬಹುತೇಕ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​

ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದ್ದು ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್​​, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಗಂಟೆಗೆ 50-60 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ಸಾಧಾರಣ ಮಳೆಯ ನಿರೀಕ್ಷೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿಯೂ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಮಳೆಯ ಅಬ್ಬರ: ಹಾಲ್ನೊರೆಯಂತೆ ಧುಮ್ಮಿಕ್ಕಿದ ಗೋಕಾಕ್ ಜಲಪಾತ

ಸಕಲೇಶಪುರದಲ್ಲಿ ಗರಿಷ್ಠ ಮಳೆ

ನಿನ್ನೆ ಹಾಸನದ ಸಕಲೇಶಪುರದ ಹೊಗದಹಳ್ಳದಲ್ಲಿ 153.5 ಮಿ.ಮೀ., ವಿರಾಜಪೇಟೆಯ ಬಿರುನಾನಿಯಲ್ಲಿ 149 ಮಿ.ಮೀ., ಹೊಸನಗರದ ನಗರದಲ್ಲಿ 128 ಮಿ.ಮೀ., ಬೆಳ್ತಂಗಡಿಯ ನೆರಿಯದಲ್ಲಿ 104 ಮಿ.ಮೀ., ಶೃಂಗೇರಿಯ ಕಿಗ್ಗದಲ್ಲಿ 91.5 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿಲ್ಕುಂದದಲ್ಲಿ 89.5 ಮಿ.ಮೀ. ಮತ್ತು ಕಾರ್ಕಳದ ವರಂಗದಲ್ಲಿ 51.5 ಮಿ.ಮೀ. ಮಳೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *