ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆImage Credit source: PTI
ಬೆಂಗಳೂರು, ಜುಲೈ 31: ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕರಾವಳಿ ಭಾಗ ಸೇರಿ ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ವರ್ಷಧಾರೆಯಾಗಲಿದೆ. ಕೊಡುಗು, ಮೈಸೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಫೆಸಿಪಿಕ್ ಸಾಗರದಲ್ಲಿ ಉಷ್ಣಾಂಶ ಹೆಚ್ಚಳವಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
24 ಗಂಟೆಗಳ #ಕರ್ನಾಟಕ #ಮಳೆ ನಕ್ಷೆ: 30th ಜುಲೈ 8.30AM ರಿಂದ 31st ಜುಲೈ 2026 ರ 8.30AM ರವರೆಗೆ, ಅತ್ಯಧಿಕ 153.5ಮಿಮೀ @ಹಾಸನ_ಸಕಲೇಶಪುರ_ಹೊಂಗಡಹಳ್ಳ.@KarnatakaVarthe #KSNDMC #ಮುಂಗಾರುಮಳೆ #ಸುರಕ್ಷಿತವಾಗಿರಿ #ಮುನ್ನೆಚ್ಚರಿಕೆವಹಿಸಿ pic.twitter.com/mCNElWgJlp
— Karnataka State Natural Disaster Monitoring Centre (@KarnatakaSNDMC) July 31, 2026
ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಗಂಟೆಗೆ 50-60 ಕಿಲೋ ಮೀಟರ್ ವೇಗದ ಗಾಳಿಯ ಜೊತೆಗೆ ಸಾಧಾರಣ ಮಳೆಯ ನಿರೀಕ್ಷೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿಯೂ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಮಳೆಯ ಅಬ್ಬರ: ಹಾಲ್ನೊರೆಯಂತೆ ಧುಮ್ಮಿಕ್ಕಿದ ಗೋಕಾಕ್ ಜಲಪಾತ
ಸಕಲೇಶಪುರದಲ್ಲಿ ಗರಿಷ್ಠ ಮಳೆ
District-wise realized #Maximum #rainfall (mm) & rainfall #distribution details during the last 24 hrs ending at 8.30 am on 31st July 2026.#KSNDMC@KarnatakaVarthe pic.twitter.com/ngOL6viRLC
— Karnataka State Natural Disaster Monitoring Centre (@KarnatakaSNDMC) July 31, 2026
ನಿನ್ನೆ ಹಾಸನದ ಸಕಲೇಶಪುರದ ಹೊಗದಹಳ್ಳದಲ್ಲಿ 153.5 ಮಿ.ಮೀ., ವಿರಾಜಪೇಟೆಯ ಬಿರುನಾನಿಯಲ್ಲಿ 149 ಮಿ.ಮೀ., ಹೊಸನಗರದ ನಗರದಲ್ಲಿ 128 ಮಿ.ಮೀ., ಬೆಳ್ತಂಗಡಿಯ ನೆರಿಯದಲ್ಲಿ 104 ಮಿ.ಮೀ., ಶೃಂಗೇರಿಯ ಕಿಗ್ಗದಲ್ಲಿ 91.5 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿಲ್ಕುಂದದಲ್ಲಿ 89.5 ಮಿ.ಮೀ. ಮತ್ತು ಕಾರ್ಕಳದ ವರಂಗದಲ್ಲಿ 51.5 ಮಿ.ಮೀ. ಮಳೆಯಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
