ಬೆಂಗಳೂರು, ಜೂನ್ 30: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 6ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ವ್ಯಾಪಕವಾಗಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಐಎಂಡಿ ಮುನ್ಸೂಚನೆ ಹಿನ್ನೆಲೆಯಲ್ಲಿ ಮಿಂಚು ಮತ್ತು ಭಾರೀ ಮಳೆಯ ಸಂದರ್ಭ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ನದಿಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
5 ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್
#ಮಳೆ #ಮುನ್ನೆಚ್ಚರಿಕೆ :#Heavy #rainfall (64.5mm to 115.4mm) #Warning for #Karnataka. #yellow #alert@KarnatakaVarthe #KSNDMC #KarnatakaRains #Southwestmonsoon #Monsoon2026 pic.twitter.com/D9NsN0Zflc
— Karnataka State Natural Disaster Monitoring Centre (@KarnatakaSNDMC) June 30, 2026
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್ ವೇಗದ ಗಾಳಿಯ ಜೊತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ವರ್ಷಧಾರೆ ಅಂದಾಜಿಸಲಾಗಿದೆ.
ಇದನ್ನೂ ಓದಿ: ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಬೆಂಗಳೂರಲ್ಲಿಯೂ ಮಳೆ ಸಾಧ್ಯತೆ
24hrs #Forecast for #Bengaluru City:
Generally cloudy sky. Light rain with sustained wind 30-40 kmph likely in some areas.@GBAChiefComm @GBA_office @BBMPSWMSplComm @CPBlr #KSNDMC #BengaluruRains #BBMP pic.twitter.com/Il3v5in69j— Karnataka State Natural Disaster Monitoring Centre (@KarnatakaSNDMC) June 30, 2026
ಬೆಂಗಳೂರು ನಗರದಾದ್ಯಂತ ನಾಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಅದಾಗಿಯೂ ತೀವ್ರ ಗಾಳಿಯ ಜೊತೆಗೆ ಕೆಲ ಪ್ರದೇಶಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 5:35 pm, Tue, 30 June 26
