ಬೆಂಗಳೂರಲ್ಲಿ ಮಳೆImage Credit source: Farman Ali khan X Account
ಬೆಂಗಳೂರು, ಜುಲೈ 16: ಜುಲೈ ತಿಂಗಳಿನಲ್ಲಿ ಶತಮಾನದ ಬಳಿಕ ದಾಖಲೆಯ ತಾಪಮಾನ ಕಂಡಿದ್ದ ಬೆಂಗಳೂರಿಗರ (Bengaluru) ಮೇಲೆ ಕೊನೆಗೂ ವರುಣ (Rain) ಕೊಂಚ ಕೃಪೆ ತೋರಿದ್ದಾನೆ. ಮಹಾನಗರದ ಹಲವೆಡೆ ಮಳೆಯಾಗಿದ್ದು, ಏಕಾಏಕಿ ವರ್ಷದಾರೆಯ ಪರಿಣಾಮ, ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ರಾಜಾಜಿನಗರ, ಮಲ್ಲೇಶ್ವರಂ, ಕುರುಬರಹಳ್ಳಿ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜನರು ಬಸ್ ನಿಲ್ದಾಣ, ಅಂಡರ್ಪಾಸ್ಗಳಲ್ಲಿ ಆಶ್ರಯ ಪಡೆದ ದೃಶ್ಯಗಳು ಕಂಡುಬಂದಿವೆ.
ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
24-Hour #Rainfall #Forecast for #Karnataka
COASTAL KARNATAKA
Light to moderate rain with sustained wind (30-40 Kmph) likely to occur at a few places over DakshinaKannada Udupi & UttaraKannada dists.NORTH INTERIOR KARNATAKA
Light rain with sustained wind (30-40 Kmph) likely to— Karnataka State Natural Disaster Monitoring Centre (@KarnatakaSNDMC) July 16, 2026
ನೈಋತ್ಯ ಮುಂಗಾರಿನ ಅಭಾವದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳ ತಾಪಮಾನದಲ್ಲಿ ಹೆಚ್ಚಳದ ನಡುವೆಯೂ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯ ಜೊತೆಗೆ ಸಾಧಾರಣ ಮಳೆಯಾಗಲಿದೆ. ಹಾಗೆಯೇ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಅಂದಾಜಿಸಲಾಗಿದೆ.
ಇದನ್ನೂ ಓದಿ: ನೇರವಾಗಿ ಮಳೆ ನೀರು ಕುಡಿಯುವುದು ಸುರಕ್ಷಿತವೇ? ತಜ್ಞರು ಹೇಳಿದ ಸತ್ಯ
ಹೇಗಿರಲಿದೆ ಮುಂದಿನ 7 ದಿನಗಳ ವಾತಾವರಣ?
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ & #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶ ಏರಿಕೆಯಾಗಲಿದೆ. ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಹಗುರ ಮಳೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ pic.twitter.com/pwpQpegYjV
— Karnataka State Natural Disaster Monitoring Centre (@KarnatakaSNDMC) July 16, 2026
ಮುಂದಿನ 7 ದಿನಗಳ ಕಾಲ ಕರ್ನಾಟಕದಾದ್ಯಂತ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶ ಏರಿಕೆಯಾಗಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಹಗುರ ಮಳೆ ಮತ್ತು ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 5:11 pm, Thu, 16 July 26
