ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (Village Administrative Officer – VA) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ. ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಈ ಪ್ರಮುಖ ಪ್ರಕಟಣೆಯನ್ನು ಹೊರಡಿಸಲಾಗಿದೆ.
ವಿಸ್ತರಿಸಲಾದ ಹೊಸ ದಿನಾಂಕಗಳ ವಿವರ:
ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು 30.07.2026 ಮತ್ತು ಶುಲ್ಕ ಪಾವತಿಸಲು 31.07.2026 ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಅಭ್ಯರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡಲಾಗಿದ್ದು, ವಿಸ್ತರಿಸಲಾದ ದಿನಾಂಕಗಳು ಕೆಳಗಿನಂತಿವೆ:
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.08.2026
- ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10.08.2026
ಇದನ್ನೂ ಓದಿ: ಜಾಬ್ ಇಂಟರ್ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್ ಟಿಪ್ಸ್ ಇಲ್ಲಿದೆ
ಮುಖ್ಯ ಸೂಚನೆ:
ದಿನಾಂಕ 10.07.2026 ರಂದು ಬಿಡುಗಡೆ ಮಾಡಲಾದ ಮೂಲ ಅಧಿಸೂಚನೆಯಲ್ಲಿನ ಉಲ್ಲೇಖಿತ ಇತರೆ ಯಾವುದೇ ನಿಯಮಗಳು ಮತ್ತು ಷರತ್ತುಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಈ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ತಕ್ಷಣವೇ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ cetonline.karnataka.gov.in ಗೆ ಭೇಟಿ ನೀಡಿ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ