ಐಪಿಎಲ್ 2026 ರ 60 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು 29 ರನ್‌ಗಳಿಂದ ಸೋಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಕೆಕೆಆರ್ ತಂಡ ಪ್ಲೇಆಫ್ ರೇಸ್ನಲ್ಲಿ ಇರಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಅದರಂತೆ ಗುಜರಾತ್ನ ಕಳಪೆ ಫಿಲ್ಡಿಂಗ್ ಹಾಗೂ ಬ್ಯಾಟರ್ಗಳ ಸ್ಫೋಟಕ ಬ್ಯಾಟಿಂಗ್ನಿಂದಾಗಿ ಕೆಕೆಆರ್ ಸುಲಭ ಜಯ ದಾಖಲಿಸಿತು. ಈಡನ್ ಗಾರ್ಡನ್ಸ್ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 247 ರನ್ ಗಳಿಸಿತು, ಇದು ಗುಜರಾತ್ ವಿರುದ್ಧ ಕೆಕೆಆರ್ ಕಲೆಹಾಕಿದ ಅತ್ಯಧಿಕ ಮೊತ್ತವಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಗುಜರಾತ್ 218 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು.
