
ಇಂದು ಈಡನ್ ಗಾರ್ಡನ್ಸ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ಮುಖಾಮುಖಿಯಾಗಿವೆ. ಇದು ಈ ಆವೃತ್ತಿಯ 15 ನೇ ಪಂದ್ಯವಾಗಿದೆ. ಇಲ್ಲಿಯವರೆಗೆ ಆತಿಥೇಯ ಕೆಕೆಆರ್ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ. ಇತ್ತ ಲಕ್ನೋ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ. ಹೀಗಾಗಿ ಇಂದಿನ ಪಂದ್ಯ ಗೆಲುವಿನ ದೃಷ್ಟಯಿಂದ ಉಭಯ ತಂಡಗಳಿಗೂ ಅತ್ಯಂತ ಮಹತ್ವದಾಗಿದೆ. ಲಕ್ನೋಗೆ ಹೋಲಿಸಿದರೆ, ಕೆಕೆಆರ್ ತಂಡ ಎಲ್ಲಾ ವಿಭಾಗದಲ್ಲೂ ಕಳಪೆ ಪ್ರದರ್ಶನದಿಂದ ಸೊರುಗುತ್ತಿದೆ. ಹೀಗಾಗಿ ಕೆಕೆಆರ್ ತಂಡದ ಮೇಲೆ ಈ ಪಂದ್ಯದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿದೆ.
ಟಾಸ್ ಗೆದ್ದ ಲಕ್ನೋ
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಬಳಿಕ ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ ಪಂತ್ ಆಡುವ 11ರ ಬಳಗದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದಿದ್ದಾರೆ. ಅಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವೇ ಈ ಪಂದ್ಯದಲ್ಲೂ ಆಡುತ್ತಿದೆ. ಏತನ್ಮಧ್ಯೆ, ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಅಜಿಂಕ್ಯ ರಹಾನೆ ಬ್ಲೆಸಿಂಗ್ ಮುಜರಬಾನಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನದಲ್ಲಿ ಸುನಿಲ್ ನರೈನ್ ಆಡುತ್ತಿರುವುದಾಗಿ ಹೇಳಿದ್ದಾರೆ.
ಮುಖಾಮುಖಿ ದಾಖಲೆ
ಐಪಿಎಲ್ ಇತಿಹಾಸದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ಆರು ಪಂದ್ಯಗಳು ನಡೆದಿವೆ. ಇದರಲ್ಲಿ, ಲಕ್ನೋ ತಂಡವು ಸ್ಪಷ್ಟ ಪ್ರಾಬಲ್ಯವನ್ನು ಸಾಧಿಸಿರುವುದನ್ನು ಕಾಣಬಹುದಾಗಿದೆ. ಲಕ್ನೋ ತಂಡ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ಕೆಕೆಆರ್ ಕೇವಲ ಎರಡು ಪಂದ್ಯವನ್ನು ಗೆದ್ದಿದೆ. ಈಡನ್ ಗಾರ್ಡನ್ಸ್ಗೆ ಸಂಬಂಧಿಸಿದಂತೆ, ಇಲ್ಲಿ ನಡೆದ ಮೂರು ಪಂದ್ಯಗಳಲ್ಲಿ ಲಕ್ನೋ ಎರಡು ಬಾರಿ ಗೆದ್ದಿದೆ. ಅಂಕಿಅಂಶಗಳ ಪ್ರಕಾರ, ಲಕ್ನೋ, ಕೆಕೆಆರ್ ಮೇಲೆ ಪ್ರಾಬಲ್ಯ ಹೊಂದಿದೆ ಎಂಬುದನ್ನು ಗಮನಿಸಬಹುದಾಗಿದೆ.
KKR vs LSG IPL 2026 Live Score: ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ
ಉಭಯ ತಂಡಗಳ ಪ್ಲೇಯಿಂಗ್ 11
ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ (ನಾಯಕ), ಫಿನ್ ಅಲೆನ್, ಕ್ಯಾಮೆರಾನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ರಿಂಕು ಸಿಂಗ್, ರೋವ್ಮನ್ ಪೊವೆಲ್, ರಮಣದೀಪ್ ಸಿಂಗ್, ಅನುಕುಲ್ ರಾಯ್, ಸುನಿಲ್ ನರೈನ್, ನವದೀಪ್ ಸೈನಿ, ಕಾರ್ತಿಕ್ ತ್ಯಾಗಿ.
ಇಂಪ್ಯಾಕ್ಟ್ ಪ್ಲೇಯರ್ಸ್: ಮನೀಶ್ ಪಾಂಡೆ, ವೈಭವ್ ಅರೋರಾ, ತೇಜಸ್ವಿ ಸಿಂಗ್, ರಾಹುಲ್ ತ್ರಿಪಾಠಿ, ಟಿಮ್ ಸೀಫರ್ಟ್.
ಲಕ್ನೋ ಸೂಪರ್ ಜೈಂಟ್ಸ್: ಮಿಚೆಲ್ ಮಾರ್ಷ್, ಐಡೆನ್ ಮರ್ಕ್ರಾಮ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ನಿಕೋಲಸ್ ಪೂರನ್, ಅಬ್ದುಲ್ ಸಮದ್, ಮುಕುಲ್ ಚೌಧರಿ, ಎಂ ಸಿದ್ಧಾರ್ಥ್, ಅವೇಶ್ ಖಾನ್, ಮೊಹಮ್ಮದ್ ಶಮಿ, ದಿಗ್ವೇಶ್ ರಾಠಿ, ಪ್ರಿನ್ಸ್ ಯಾದವ್.
ಇಂಪ್ಯಾಕ್ಟ್ ಪ್ಲೇಯರ್ಸ್: ಆಯುಷ್ ಬಡೋನಿ, ಮ್ಯಾಥ್ಯೂ ಬ್ರೀಟ್ಜ್ಕೆ, ಶಹಬಾಜ್ ಅಹ್ಮದ್, ಮಯಾಂಕ್ ಯಾದವ್, ಹಿಮ್ಮತ್ ಸಿಂಗ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ