ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್ 19 ನೇ ಸೀಸನ್ನ ತನ್ನ ಮೂರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಎರಡೂ ತಂಡಗಳ ನಡುವಿನ ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಕೆಕೆಆರ್ ಮೊದಲ ಎರಡು ಪಂದ್ಯಗಳಲ್ಲಿ ಸೋತಿದ್ದರೆ, ಶ್ರೇಯಸ್ ಅಯ್ಯರ್ ಮೊದಲ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಆದ್ದರಿಂದ, ಪಂಜಾಬ್ ಸೋಮವಾರ ಮೈದಾನಕ್ಕಿಳಿದು ಸತತ ಮೂರನೇ ಪಂದ್ಯವನ್ನು ಗೆದ್ದು ಹ್ಯಾಟ್ರಿಕ್ ಗೆಲುವಿನ ಇರಾದೆಯಲ್ಲಿದ್ದರೆ, ಮತ್ತೊಂದೆಡೆ, ಕೆಕೆಆರ್ ಸೋಲಿನ ಹ್ಯಾಟ್ರಿಕ್ ತಪ್ಪಿಸುವ ಸವಾಲನ್ನು ಎದುರಿಸಲಿದೆ.
