
ಐಪಿಎಲ್ 2026 (IPL 2026) ರ ಆರನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ (Kolkata Knight Riders vs Sunrisers Hyderabad) ನಡುವೆ ನಡೆಯುತ್ತಿದೆ. ಆರಂಭಿಕ ಪಂದ್ಯಗಳಲ್ಲಿ ಸೋತ ಎರಡೂ ತಂಡಗಳು ಒತ್ತಡದಲ್ಲಿವೆ. ಸನ್ರೈಸರ್ಸ್ ಹೈದರಾಬಾದ್ ತನ್ನ ಮೊದಲ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಸೋತರೆ, ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿತ್ತು. ಆದ್ದರಿಂದ, ಈ ಎರಡು ತಂಡಗಳು ತಮ್ಮ ಮೊದಲ ಗೆಲುವನ್ನು ಎದುರು ನೋಡುತ್ತಿವೆ. ಉಭಯ ತಂಡಗಳು ಬಲಿಷ್ಠವಾಗಿದ್ದು, ಯಾರು ಗೆಲುವು ಸಾಧಿಸುತ್ತಾರೆ ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ.
ಟಾಸ್ ಗೆದ್ದ ಕೋಲ್ಕತ್ತಾ ಬೌಲಿಂಗ್ ಆಯ್ಕೆ
ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಬಳಿಕ ಮಾತನಾಡಿದ ನಾಯಕ ಅಜಿಂಕ್ಯ ರಹಾನೆ ತಮ್ಮ ಪ್ಲೇಯಿಂಗ್ 11 ರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದಿದ್ದಾರೆ. ಇತ್ತ ಸನ್ರೈಸರ್ಸ್ ಹೈದರಾಬಾದ್ ತಮ್ಮ ಪ್ಲೇಯಿಂಗ್ 11 ರಲ್ಲಿ ಒಂದು ಬದಲಾವಣೆಯನ್ನು ಮಾಡಿದೆ. ಅದರಂತೆ ಹರ್ಷಲ್ ಪಟೇಲ್ ಬದಲಿಗೆ ಸ್ಪಿನ್ನರ್ ಶಿವಾಂಗ್ ಕುಮಾರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಮುಖಾಮುಖಿ ದಾಖಲೆ
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಇದುವರೆಗೆ 30 ಪಂದ್ಯಗಳನ್ನು ಆಡಿವೆ. ಈ ಮುಖಾಮುಖಿಯಲ್ಲಿ ಕೆಕೆಆರ್ ಪ್ರಾಬಲ್ಯ ಸಾಧಿಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ 20 ಪಂದ್ಯಗಳನ್ನು ಗೆದ್ದಿದ್ದರೆ, ಸನ್ರೈಸರ್ಸ್ ಹೈದರಾಬಾದ್ ಕೇವಲ 10 ಪಂದ್ಯಗಳನ್ನು ಗೆದ್ದಿದೆ. ಕಳೆದ ಆವೃತ್ತಿಯಲ್ಲಿ, ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದು ಸಮಬಲ ಸಾಧಿಸಿದ್ದವು. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಮೇಲುಗೈ ಸಾಧಿಸಲಿದೆ.
TOSS @kkriders won the toss against @sunrisers and will field first Updates
https://t.co/iCMFpDudP7#TATAIPL | #KhelBindaas | #KKRvSRH pic.twitter.com/AatcEELPeZ — IndianPremierLeague (@IPL) April 2, 2026
KKR vs SRH IPL 2026 Live Score: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ
ಉಭಯ ತಂಡಗಳ ಪ್ಲೇಯಿಂಗ್ 11
ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ (ನಾಯಕ), ಕ್ಯಾಮರೂನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ರಿಂಕು ಸಿಂಗ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ, ಬ್ಲೆಸಿಂಗ್ ಮುಜರಬಾನಿ.
ಸನ್ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಮುಖ್ಯಸ್ಥ, ಇಶಾನ್ ಕಿಶನ್ (ವಿಕೆಟ್ ಕೀಪರ್/ ನಾಯಕ), ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಸಲೀಲ್ ಅರೋರಾ, ಹರ್ಷ್ ದುಬೆ, ಶಿವಂಗ್ ಕುಮಾರ್, ಜಯದೇವ್ ಉನಾದ್ಕತ್, ಡೇವಿಡ್ ಪೇನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ