
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಕೆಕೆಆರ್ ತಂಡ, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಪರ ಆರಂಭಿಕ ಫಿನ್ ಅಲೆನ್ ಮೊದಲ ಓವರ್ನಲ್ಲೇ ಬೌಂಡರಿ ಹಾಗೂ ಸಿಕ್ಸರ್ಗಳ ಮಳೆಗರೆದು 25 ರನ್ ಕಲೆಹಾಕಿದರು.
ಸನ್‌ರೈಸರ್ಸ್ ಪರ ಡೇವಿಡ್ ಪೇನ್ ಮೊದಲ ಓವರ್ ಬೌಲ್ ಮಾಡಿದರು. ಈ ಓವರ್ನ ಮೊದಲ ಎಸೆತವನ್ನು ಎದುರಿಸಿದ ನಾಯಕ ಅಜಿಂಕ್ಯ ರಹಾನೆ ಸಿಂಗಲ್ ತೆಗೆದುಕೊಂಡು ಅಲೆನ್ಗೆ ಸ್ಟ್ರೈಕ್ ನೀಡಿದರು. ಅಲೆನ್ ತಾವು ಎದುರಿಸಿದ ಮೊದಲ ಎಸೆತವನ್ನೇ ಬೌಂಡರಿಗಟ್ಟಿದರು. ನಂತರದ ಎರಡು ಎಸೆತಗಳಲ್ಲಿ ಭರ್ಜರಿ ಸಿಕ್ಸರ್ ಬಾರಿಸಿದರು. ಕೊನೆಯ ಎರಡು ಎಸೆತಗಳಲ್ಲಿ ಬೌಂಡರಿ ಬಂತು. ಈ ಮೂಲಕ ಅಲೆನ್ ತಾವು ಎದುರಿಸಿದ ಐದು ಎಸೆತಗಳಲ್ಲಿ 24 ರನ್ ಕಲೆಹಾಕಿದರು.
ಆ ಬಳಿಕವೂ ಅಬ್ಬರಿಸಿದ ಅಲೆನ್ ಮುಂದಿನ ಓವರ್ನಲ್ಲಿ ಎದುರಿಸಿದ ಮೊದಲ ಎಸೆತವನ್ನು ಬೌಂಡರಿಗಟ್ಟಿದರು. ಆದರೆ ಮುಂದಿನ ಎಸೆತದಲ್ಲಿ ಮತ್ತೊಂದು ಬೌಂಡರಿ ಬಾರಿಸಲು ಯತ್ನಿಸಿ ಬೌಲರ್ ಹರ್ಷ್ ದುಬೆಗೆ ಕ್ಯಾಚಿತ್ತು ಔಟಾದರು. ಅಂತಿಮವಾಗಿ ಅಲೆನ್ ತಮ್ಮ ಇನ್ನಿಂಗ್ಸ್ನಲ್ಲಿ 7 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 28 ರನ್ ಬಾರಿಸಿ ಔಟಾದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ