ಮಂಡ್ಯ, ಜುಲೈ 31: ತಮಿಳುನಾಡಿಗೆ ನೀರು ಹರಿಸುವಂತೆ CWMA ಆದೇಶ ಖಂಡಿಸಿ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಎಲ್ಲರನ್ನೂ ವಾಹನದಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರಮುಖರು ಭಾಗಿಯಾಗಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
