ಚಿಕ್ಕಮಗಳೂರು, ಜನವರಿ 14: KSRTC ಬಸ್ನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರಾಗಿರುವ ಘಟನೆ ಚಿಕ್ಕಮಗಳೂರಿನ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಚ್ಚಿ ಬೀಳಿಸುವ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕುರುವಂಗಿ ಮೂಲದ ಆಂಜನೇಯ (75) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುವಂಗಿ ಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಆಂಜನೇಯ ಬಂದಿದ್ದಾಗ ಅವಘಡ ಸಂಭವಿಸಿದ್ದು, ನಿರ್ಲಕ್ಷ್ಯದ ಚಾಲನೆ ಮಾಡಿದ ಬಸ್ ಚಾಲಕನ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಜನವರಿ 7ರಂದು ನಡೆದ ಘಟನೆಯ ದೃಶ್ಯ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
