ಬೆಂಗಳೂರು, ಜುಲೈ 08: ಭಾರತ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆಕ್ಷೇಪ ತೆಗೆದಿದ್ದು, ಮನೆ ಮನೆಗೆ ತೆರಳಿ ಎಸ್ಐಆರ್ ನಡೆಸದೆ ಮಸೀದಿ ಮತ್ತು ಸಮುದಾಯಭವನಗಳಲ್ಲಿ ಜನರನ್ನು ಗುಂಪು ಸೇರಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ಗೆ ದೂರು ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅವರ ಈ ಸುದ್ದಿಗೋಷ್ಠಿ ಮಹತ್ವ ಪಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
