LSG vs CSK: ಲಕ್ನೋ ವಿರುದ್ಧ ಸೋತ ಸಿಎಸ್​ಕೆಗೆ ಪ್ಲೇಆಫ್‌ ಮತ್ತಷ್ಟು ಕಠಿಣ – Kannada News | IPL 2026: LSG Beats CSK by 7 Wickets in Match 59; Chennai’s Playoff Hopes Dim

ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಈ ಆವೃತ್ತಿಯ 4ನೇ ಗೆಲುವು ದಾಖಲಿಸಿತು. ಇತ್ತ ಲಕ್ನೋ ವಿರುದ್ಧ ಸೋತ ಸಿಎಸ್​ಕೆಗೆ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದ್ದು, ಉಳಿದೆರಡು ಪಂದ್ಯಗಳನ್ನು ಗೆದ್ದರೂ ಅದು ಪ್ಲೇಆಫ್ ತಲುಪುವುದು ಕಷ್ಟಕರವಾಗಿದೆ. ಈ ಪಂದ್ಯದಲ್ಲಿ ಮೊಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕಾರ್ತಿಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 187 ರನ್ ಗಳಿಸಿ ಲಕ್ನೋಗೆ ಗೆಲ್ಲಲು 188 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಲಕ್ನೋ16.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಜಯದ ನಗೆ ಬೀರಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್‌ಕೆ ತಂಡಕ್ಕೆ ಸಾಧಾರಣ ಆರಂಭ ಸಿಕ್ಕಿತು. ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ 20 ರನ್ ಗಳಿಸಿ ಔಟಾದರೆ, ನಾಯಕ ರುತುರಾಜ್ ಗಾಯಕ್ವಾಡ್ ಕೂಡ 13 ರನ್​ಗಳಿಗೆ ಸುಸ್ತಾದರು. ಕಳೆದ ಪಂದ್ಯದಲ್ಲಿ 13 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಉರ್ವಿಲ್ ಪಟೇಲ್ ಕೇವಲ 6 ರನ್​ಗಳಿಗೆ ಸುಸ್ತಾದರು.

ತಂಡದ ಪರ ಏಕಾಂಗಿ ಹೋರಾಟ ನೀಡಿದ ಕಾರ್ತಿಕ್ ಶರ್ಮಾ 35 ಎಸೆತಗಳಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅರ್ಧಶತಕ ಬಾರಿಸಿ, 71 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಡೆವಾಲ್ಡ್ ಬ್ರೆವಿಸ್ 25 ರನ್ ಗಳಿಸಿ ಔಟಾದರೆ, ಶಿವಂ ದುಬೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 32 ರನ್ ಮತ್ತು ಪ್ರಶಾಂತವೀರ್ 13 ರನ್ ಬಾರಿಸಿ ಅಜೇಯರಾಗಿ ಉಳಿದರು. ಲಕ್ನೋ ಪರ ಆಕಾಶ್ ಸಿಂಗ್ ಗರಿಷ್ಠ 3 ವಿಕೆಟ್ ಪಡೆದರೆ, ಶಮಿ ಮತ್ತು ಶಹಬಾಜ್ ಅಹ್ಮದ್ ತಲಾ ಒಂದು ಯಶಸ್ಸು ಕಂಡರು.

Source link

Leave a Reply

Your email address will not be published. Required fields are marked *