IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ… (PC: IPL)
ಫಿಲ್ ಸಾಲ್ಟ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದಾಂದಿಗ ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಸಾಲ್ಟ್ ಚಿಕಿತ್ಸೆಗಾಗಿ ಇಂಗ್ಲೆಂಡ್ಗೆ ಮರಳಿದ್ದು, ಹೀಗಾಗಿ ಎಲ್ಎಸ್ಜಿ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)
ಮ್ಯಾಥ್ಯೂ ಬ್ರೀಟ್ಝ್ಕೆ: ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಫೋಟಕ ದಾಂಡಿಗ ಮ್ಯಾಥ್ಯೂ ಬ್ರೀಟ್ಝ್ಕೆ ವೈಯುಕ್ತಿಕ ಕಾರಣಗಳಿಗಾಗಿ ಸೌತ್ ಆಫ್ರಿಕಾಗೆ ಮರಳಿದ್ದಾರೆ. ಹೀಗಾಗಿ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಬ್ರೀಟ್ಜ್ಕೆ ಕಣಕ್ಕಿಳಿಯುವುದಿಲ್ಲ. (PC: IPL)
ನುವಾನ್ ತುಷಾರ: ಆರ್ಸಿಬಿ ವೇಗಿ ನುವಾನ್ ತುಷಾರ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ತುಷಾರ ಕೂಡ ಎಲ್ಎಸ್ಜಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. (PC: IPL)
ವನಿಂದು ಹಸರಂಗ: ಎಲ್ಎಸ್ಜಿ ತಂಡದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದೀಗ ಅವರ ಬದಲಿಗೆ ಜಾರ್ಜ್ ಲಿಂಡೆಯನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ವನಿಂದು ಹಸರಂಗ ಕೂಡ ಕಾಣಿಸಿಕೊಳ್ಳುವುದಿಲ್ಲ. (PC: IPL)
ಯಶ್ ದಯಾಳ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಎಡಗೈ ವೇಗಿ ಯಶ್ ದಯಾಳ್ ಈ ಬಾರಿಯ ಐಪಿಎಲ್ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿರುವ ದಯಾಳ್ ಕೂಡ ಎಲ್ಎಸ್ಜಿ ವಿರುದ್ಧದ ಮ್ಯಾಚ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)
