IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ.
ಇನ್ನು ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಐಪಿಎಲ್ನಲ್ಲಿ 6 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದಿರುವುದು ರಾಜಸ್ಥಾನ್ ರಾಯಲ್ಸ್. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್ಆರ್ ಪಡೆ 4 ಬಾರಿ ಗೆದ್ದಿದ್ದರೆ, ಎಲ್ಎಸ್ಜಿ ಜಯ ಸಾಧಿಸಿದ್ದು ಕೇವಲ 2 ಬಾರಿ ಮಾತ್ರ.
ಇದಾಗ್ಯೂ ಕಳೆದ ಎರಡು ಪಂದ್ಯಗಳಲ್ಲೂ ಉಭಯ ತಂಡಗಳು ಸೋಲನುಭವಿಸಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಗೆಲ್ಲಲು ಎರಡೂ ತಂಡಗಳು ಕಠಿಣ ಪ್ರಯತ್ನ ನಡೆಸಲಿದ್ದು, ಇದಕ್ಕಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಆಡಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಆಯುಷ್ ಬಡೋನಿ, ರಿಷಭ್ ಪಂತ್ (ನಾಯಕ), ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಮುಕುಲ್ ಚೌಧರಿ, ಮೊಹಮ್ಮದ್ ಶಮಿ, ಮೊಹ್ಸಿನ್ ಖಾನ್, ಪ್ರಿನ್ಸ್ ಯಾದವ್, ದಿಗ್ವೇಶ್ ಸಿಂಗ್ ರಾಠಿ, ಮಯಾಂಕ್ ಯಾದವ್.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್, ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ, ನಾಂಡ್ರೆ ಬರ್ಗರ್.