Maharashtra Blast: ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು – Kannada News | Major Explosion at Explosives Factory in Nagpur Claims at Least 15 Lives

ನಾಗ್ಪುರ, ಮಾರ್ಚ್ 01: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಘಟನೆ ಸಂಭವಿಸಿದೆ. ಸ್ಫೋಟಕಗಳನ್ನು ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟ ಇದಾಗಿದೆ. ಘಟನೆಯಲ್ಲಿ ಮಹಿಳೆಯರು ಸೇರಿ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ. 18 ಜನರಿಗೆ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆ ಪಾಳಿಗೆ ಕೆಲಸಕ್ಕೆ ಬಂದಿದ್ದ 35 ಕಾರ್ಮಿಕರು ಸ್ಥಳದಲ್ಲಿದ್ದರು.

ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕರಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ . ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಬೆಳಗ್ಗೆ 7 ರಿಂದ 7.15 ರ ನಡುವೆ ಈ ಘಟನೆ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಹೇಳಿಕೆ ನೀಡುವುದಾಗಿ ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Leave a Reply

Your email address will not be published. Required fields are marked *