
ಐಪಿಎಲ್ 19 ನೇ ಸೀಸನ್ನ (IPL 2026) ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (Mumbai Indians vs Kolkata Knight Riders) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದು, ಅಜಿಂಕ್ಯ ರಹಾನೆ ಕೆಕೆಆರ್ ತಂಡದ ನಾಯಕರಾಗಿದ್ದಾರೆ. ಈ ಪಂದ್ಯ ಮುಂಬೈನ ತವರು ಮೈದಾನದಲ್ಲಿ ನಡೆಯುತ್ತಿದೆ. ಆದ್ದರಿಂದ, ಮುಂಬೈ ಗೆಲುವಿನೊಂದಿಗೆ ಲೀಗ್ ಆರಂಭಿಸಲು ನೋಡುತ್ತಿದ್ದರೆ, ಇತ್ತ ಕೆಕೆಆರ್ ಕೂಡ ಗೆಲುವಿನ ಮೇಲೆ ಗುರಿ ಇಟ್ಟಿದೆ.
ಟಾಸ್ ಗೆದ್ದ ಮುಂಬೈ
ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಕೆಕೆಆರ್ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ. ಅದರಂತೆ ಮುಂಬೈ ತಂಡದ ಪ್ಲೇಯಿಂಗ್ 11 ನಲ್ಲಿ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿಲ್ಲ. ಹಾಗಂತ ಅವರು ಪಂದ್ಯದಿಂದ ಹೊರಬಿದ್ದಿಲ್ಲ. ಬದಲಿಗೆ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಲಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ಕಳೆದ ಆವೃತ್ತಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ, ಈ ಪಂದ್ಯದಲ್ಲಿ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆದಿದ್ದಾರೆ.
ಹೆಡ್ ಟು ಹೆಡ್ ದಾಖಲೆ
ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇದುವರೆಗೆ 35 ಪಂದ್ಯಗಳನ್ನು ಆಡಿವೆ. ಈ ಪೈಕಿ ಮುಂಬೈ ಇಂಡಿಯನ್ಸ್ 24 ಪಂದ್ಯಗಳನ್ನು ಗೆದ್ದಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ 11 ಪಂದ್ಯಗಳನ್ನು ಗೆದ್ದಿದೆ. ಆದಾಗ್ಯೂ, 2012 ರಿಂದ ಮುಂಬೈ ಇಂಡಿಯನ್ಸ್ ತಮ್ಮ ಮೊದಲ ಪಂದ್ಯವನ್ನು ಗೆದ್ದಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ತನ್ನ ಸೋಲಿನ ಇತಿಹಾಸವನ್ನು ಬದಲಿಸಲು ಮುಂಬೈ ಎದುರು ನೋಡುತ್ತಿದೆ. ಹಾಗೆಯೇ ಇದು ವಾಂಖೆಡೆ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಿನ 13 ನೇ ಪಂದ್ಯ ಆಗಿದೆ. ಮುಂಬೈ ಇದುವರೆಗೆ 12 ಪಂದ್ಯಗಳಲ್ಲಿ 10 ರಲ್ಲಿ ಗೆದ್ದಿದ್ದರೆ, ಕೋಲ್ಕತ್ತಾ ಕೇವಲ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದೆ.
MI vs KKR IPL 2026 Live Score: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ
Toss
@mipaltan have won the toss and elected to bowl first against @KKRiders in Match 2⃣
Updates
https://t.co/JmJcgsoHQ7#TATAIPL | #KhelBindaas | #MIvKKR pic.twitter.com/GgI4BwiTd7
— IndianPremierLeague (@IPL) March 29, 2026
ಉಭಯ ತಂಡಗಳ ಪ್ಲೇಯಿಂಗ್ 11
ಕೆಕೆಆರ್: ಫಿನ್ ಅಲೆನ್, ಅಜಿಂಕ್ಯ ರಹಾನೆ (ನಾಯಕ), ಕ್ಯಾಮೆರಾನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ರಿಂಕು ಸಿಂಗ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಬ್ಲೆಸಿಂಗ್ ಮುಜರಬಾನಿ.
ಮುಂಬೈ ಇಂಡಿಯನ್ಸ್: ರಿಯಾನ್ ರಿಕಲ್ಟನ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶೆರ್ಫಾನೆ ರುದರ್ಫೋರ್ಡ್, ನಮನ್ ಧೀರ್, ಶಾರ್ದೂಲ್ ಠಾಕೂರ್, ಮಯಾಂಕ್ ಮಾರ್ಕಾಂಡೆ, ಅಲ್ಲಾ ಗಜನ್ಫರ್, ಟ್ರೆಂಟ್ ಬೌಲ್ಟ್ ಮತ್ತು ಜಸ್ಪ್ರೀತ್ ಬುಮ್ರಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Toss