
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿತ್ತು. ಈ ಲೀಗ್ನಲ್ಲಿ ಉಭಯ ತಂಡಗಳಿಗೆ ಇದು ನಾಲ್ಕನೇ ಪಂದ್ಯವಾಗಿತ್ತು. ಅದರಂತೆ ತವರು ಮೈದಾನದಲ್ಲಿ ಆರ್ಸಿಬಿಯನ್ನು ಮಣಿಸುವ ಇರಾದೆಯಲ್ಲಿದ್ದ ಮುಂಬೈಗೆ ಮತ್ತೆ ನಿರಾಸೆ ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಮೂವರ ಅರ್ಧಶತಕದ ನೆರವಿನಿಂದ 241 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ 222 ರನ್ ಕಲೆಹಾಕಲಷ್ಟೇ ಶಕ್ತವಾಗಿ 19 ರನ್ಗಳಿಂದ ಸೋಲೊಪ್ಪಿಕೊಂಡಿತು. ಇದು ಮುಂಬೈಗೆ ಸತತ ಎರಡನೇ ಸೋಲಾದರೆ, ಇತ್ತ ಕಳೆದ ಪಂದ್ಯದಲ್ಲಿ ಸೋಲುಕಂಡಿದ್ದ ಆರ್ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ.