MI vs RCB Playing XI: ಟಾಸ್ ಗೆದ್ದ ಮುಂಬೈ; ಆರ್​ಸಿಬಿ ಪ್ಲೇಯಿಂಗ್​ 11 ನಿಂದ ಹೇಜಲ್​ವುಡ್ ಔಟ್

MI vs RCB Playing XI: ಟಾಸ್ ಗೆದ್ದ ಮುಂಬೈ; ಆರ್​ಸಿಬಿ ಪ್ಲೇಯಿಂಗ್​ 11 ನಿಂದ ಹೇಜಲ್​ವುಡ್ ಔಟ್

ಐಪಿಎಲ್ 2026 (IPL 2026) ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡವನ್ನು ಎದುರಿಸಿದೆ. ಎರಡೂ ತಂಡಗಳಿಗೆ ಇದು ಈ ಆವೃತ್ತಿಯ ನಾಲ್ಕನೇ ಪಂದ್ಯವಾಗಿದೆ. ಎರಡೂ ತಂಡಗಳು ಕಳೆದ ಪಂದ್ಯದಲ್ಲಿ ಸೋತಿವೆ. ಆದ್ದರಿಂದ, ಎರಡೂ ತಂಡಗಳು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿವೆ. ಒಂದೆಡೆ ಆರ್​ಸಿಬಿ ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು 1 ಪಂದ್ಯದಲ್ಲಿ ಸೋತಿದ್ದು, 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇತ್ತ ಮುಂಬೈ ಇಂಡಿಯನ್ಸ್ ಆಡಿರುವ ಮೂರು ಪಂದ್ಯಗಲ್ಲಿ 2 ರಲ್ಲಿ ಸೋತು, ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಹೀಗಾಗಿ ಎರಡು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಟಾಸ್ ಗೆದ್ದ ಮುಂಬೈ

ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಮುಂಬೈ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಅಲ್ಲಾ ಗಜನ್ಫರ್ ಮತ್ತು ದೀಪಕ್ ಚಹಾರ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಅವರ ಬದಲಿಗೆ ಮಯಾಂಕ್ ಮಾರ್ಕಂಡೆ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇತ್ತ ಆರ್​ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜೋಶ್ ಹೇಜಲ್‌ವುಡ್ ಬದಲಿಗೆ ಜಾಕೋಬ್ ಡಫಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಮುಖಾಮುಖಿ ದಾಖಲೆ

ಐಪಿಎಲ್‌ನಲ್ಲಿ ಇಲ್ಲಿಯವರೆಗೆ ಈ ಎರಡೂ ತಂಡಗಳ ನಡುವೆ ಒಟ್ಟು 34 ಪಂದ್ಯಗಳು ನಡೆದಿವೆ. ಮುಂಬೈ ಇಂಡಿಯನ್ಸ್ ಈ 34 ಪಂದ್ಯಗಳಲ್ಲಿ 20 ಪಂದ್ಯಗಳನ್ನು ಗೆದ್ದಿದ್ದರೆ ಆರ್‌ಸಿಬಿ 14 ಪಂದ್ಯಗಳನ್ನು ಗೆದ್ದಿದೆ. ಈ ದಾಖಲೆಯು ಮುಂಬೈ ತಂಡವು ಐತಿಹಾಸಿಕವಾಗಿ ಮೇಲುಗೈ ಸಾಧಿಸಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ.

MI vs RCB IPL 2026 Live Score: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಕಳೆದ 5 ಪಂದ್ಯಗಳ ದಾಖಲೆ

ಒಟ್ಟಾರೆಯಾಗಿ ಮುಂಬೈ ತಂಡಕ್ಕೆ ಅನುಕೂಲವಿದ್ದರೂ, ಇತ್ತೀಚಿನ ದಿನಗಳಲ್ಲಿ ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡಿದೆ. ಎರಡೂ ತಂಡಗಳ ನಡುವೆ ನಡೆದ ಕೊನೆಯ ಐದು ಪಂದ್ಯಗಳ ಫಲಿತಾಂಶಗಳನ್ನು ನೋಡಿದರೆ, ಆರ್‌ಸಿಬಿಯ ಪ್ರದರ್ಶನವು ಉತ್ತಮವಾಗಿದೆ. ಆರ್‌ಸಿಬಿ ಕಳೆದ ಐದು ಪಂದ್ಯಗಳಲ್ಲಿ ಮೂರನ್ನು ಗೆದ್ದಿದೆ. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ಕೇವಲ ಎರಡು ಪಂದ್ಯಗಳನ್ನು ಗೆದ್ದಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ, ರಿಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್ ಮತ್ತು ಮಯಾಂಕ್ ಮಾರ್ಕಾಂಡೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಕೋಬ್ ಡಫ್ಫಿ, ಮತ್ತು ಸುಯಾಶ್ ಶರ್ಮಾ.

Source link

Leave a Reply

Your email address will not be published. Required fields are marked *