MI vs SRH: ಮುಂಬೈ ಪರ ಅತಿವೇಗದ ಶತಕ ಬಾರಿಸಿದ ರಿಯಾನ್ ರಿಕಲ್ಟನ್ – Kannada News | IPL 2026: Ryan Rickelton Blazes Fastest MI Century vs SRH, Breaks Record!

ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಪರ ಆರಂಭಿಕ ರಿಯಾನ್ ರಿಕಲ್ಟನ್ ಸ್ಫೋಟಕ ಶತಕ ಬಾರಿಸುವ ಮೂಲಕ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 44 ಎಸೆತಗಳನ್ನು ಎದುರಿಸಿದ ರಿಕಲ್ಟನ್ ಎಂಟು ಬೌಂಡರಿ ಮತ್ತು ಏಳು ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಪರ ಅತಿ ವೇಗದ ಶತಕ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದರು.

ರಿಕಲ್ಟನ್, ವಿಲ್ ಜ್ಯಾಕ್ಸ್ ಜೊತೆಗೂಡಿ ತಂಡಕ್ಕೆ 93 ರನ್‌ಗಳ ಸ್ಫೋಟಕ ಆರಂಭ ನೀಡಿದರು. ಈ ಹಂತದಲ್ಲಿ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಜ್ಯಾಕ್ಸ್ ಔಟಾದ ನಂತರವೂ ಅಮೋಘ ಪ್ರದರ್ಶನ ಮುಂದುವರಿಸಿದ ರಿಕಲ್ಟನ್ ತಮ್ಮ ಮೊದಲ ಐಪಿಎಲ್ ಶತಕವನ್ನು ದಾಖಸಿದರು. ಕೇವಲ 44 ಎಸೆತಗಳಲ್ಲಿ ಈ ಸಾಧನೆ ಮಾಡಿದ ರಿಕಲ್ಟನ್ ಐಪಿಎಲ್‌ನಲ್ಲಿ ಮುಂಬೈ ಪರ ಅತ್ಯಂತ ವೇಗದ ಶತಕ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡರು. 2008 ರಲ್ಲಿ ಸನತ್ ಜಯಸೂರ್ಯ 45 ಎಸೆತಗಳಲ್ಲಿ ಶತಕ ಬಾರಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು. ತಿಲಕ್ ವರ್ಮಾ ಕೂಡ ಇದೇ ಆವೃತ್ತಿಯಲ್ಲಿ 45 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಈ ದಾಖಲೆಯನ್ನು ಸರಿಗಟ್ಟಿದ್ದರು.

Source link

Leave a Reply

Your email address will not be published. Required fields are marked *