ಮೈಸೂರು, (ಏಪ್ರಿಲ್ 19): ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ಮೂರು ಬಾರಿ ಪತ್ರ ಬರೆದಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈಗ ನಾಲ್ಕನೇ ಬಾರಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು, ವಿಧಾನಪರಿಷತ್ ಸದಸ್ಯ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಸವಣ್ಣ, ಕಾಂಗ್ರೆಸ್ ಪಕ್ಷಕ್ಕೆ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಆದ್ರೂ ನನಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿಲ್ಲ. ಮೈಸೂರು ದಸರಾ ಕಮಿಟಿಗೂ ನನ್ನನ್ನು ನೇಮಕ ಮಾಡಿಲ್ಲ. ಹೀಗಾಗಿ ರಾಹುಲ್ ಗಾಂಧಿಗೆ ಪೋಸ್ಟ್ ಮೂಲಕ ಪತ್ರ ಬರೆದಿದ್ದು, ಈ ಬಾರಿ ನನಗೆ ಎಂಎಲ್ಸಿ ಸ್ಥಾನ ಕೊಡ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.