ಕೇರಳಂ, ಮೇ.15: ದೇಶದ ಕೃಷಿ ವಲಯದ ಜೀವನಾಡಿ ಎನಿಸಿಕೊಂಡಿರುವ ನೈಋತ್ಯ ಮುಂಗಾರು ಮಳೆಯು ಈ ವರ್ಷ ನಿಗದಿತ ಸಮಯಕ್ಕಿಂತ ಸ್ವಲ್ಪ ಮುಂಚಿತವಾಗಿಯೇ ಕೇರಳವನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮೇ 26 ರಂದು ಕೇರಳಕ್ಕೆ ಮುಂಗಾರು ಅಪ್ಪಳಿಸುವ ಸಾಧ್ಯತೆಯಿದ್ದು, ಇದರಲ್ಲಿ 4 ದಿನಗಳ ಹೆಚ್ಚು-ಕಡಿಮೆ (Model Error) ಇರಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಸಾಮಾನ್ಯವಾಗಿ ಜೂನ್ 1 ರಂದು ಕೇರಳಕ್ಕೆ ಪ್ರವೇಶಿಸುವ ಮುಂಗಾರು, ಈ ಬಾರಿ ಸುಮಾರು ಒಂದು ವಾರ ಮುಂಚಿತವಾಗಿಯೇ ಆರಂಭವಾಗುತ್ತಿರುವುದು ರೈತರಲ್ಲಿ ಸಂತಸ ತಂದಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಈಗಾಗಲೇ ಮುಂಗಾರು ಪ್ರವೇಶಿಸಿದ್ದು, ಅಲ್ಲಿಂದ ಕೇರಳದತ್ತ ವೇಗವಾಗಿ ಚಲಿಸುತ್ತಿದೆ.
ಇಲ್ಲಿದೆ ನೋಡಿ ಎಕ್ಸ್ ಪೋಸ್ಟ್:
This year, the southwest monsoon is likely to set in over Kerala on 26th May with a model error of ± 4 days: India Meteorological Department (IMD) pic.twitter.com/1fw5Whhry8
— ANI (@ANI) May 15, 2026
ಕರ್ನಾಟಕಕ್ಕೆ ಯಾವಾಗ?:
ಕೇರಳಕ್ಕೆ ಪ್ರವೇಶಿಸಿದ ಸುಮಾರು ಒಂದು ವಾರದ ನಂತರ ಮುಂಗಾರು ಮಳೆಯು ಕರ್ನಾಟಕವನ್ನು ಪ್ರವೇಶಿಸುತ್ತದೆ. ಈ ಲೆಕ್ಕಾಚಾರದ ಪ್ರಕಾರ, ಜೂನ್ ಮೊದಲ ವಾರದಲ್ಲೇ ಕರುನಾಡಿಗೆ ಮಳೆಯ ಸಿಂಚನವಾಗುವ ನಿರೀಕ್ಷೆಯಿದೆ. ಕಳೆದ ವರ್ಷ ಮಳೆ ಕೊರತೆಯಿಂದ ತತ್ತರಿಸಿದ್ದ ರಾಜ್ಯಕ್ಕೆ ಈ ಬಾರಿಯ ಮುನ್ಸೂಚನೆ ಆಶಾದಾಯಕವಾಗಿದೆ.
#ಆಲಿಕಲ್ಲುಮಳೆ ಎಚ್ಚರಿಕೆ: #hailstorm #Warning: #orange #Alert #rainfall #thunderstorm #lightning #KSNDMC@dc_gadag @DcKoppal @KarnatakaVarthe #KarnatakaRains #Premonsoon pic.twitter.com/6M8KzKduIg
— Karnataka State Natural Disaster Monitoring Centre (@KarnatakaSNDMC) May 15, 2026
ಮುಂದಿನ 7 ದಿನ ರಾಜ್ಯದಲ್ಲಿ ಭಾರೀ ಮಳೆ:
ಕರ್ನಾಟಕ ರಾಜ್ಯದಾದ್ಯಂತ ಮುಂದಿನ ಒಂದು ವಾರದ ಕಾಲ ಹವಾಮಾನದಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡುಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಬಿಸಿಲಿನ ಬೇಗೆ ಮುಂದುವರಿಯಲಿದ್ದರೂ, ಸಂಜೆಯ ವೇಳೆಗೆ ಮಳೆಯ ಸಿಂಚನವಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಒಣ ಹವೆ ಮತ್ತು ಬಿಗುವಿನ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದೆ. ತಿದಿನ ಮಧ್ಯಾಹ್ನದ ನಂತರ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ.
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ (Thunderstorms & Squall) ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಗುಡುಗು-ಸಿಡಿಲು ಸಂಭವಿಸುವಾಗ ಬಯಲು ಪ್ರದೇಶದಲ್ಲಿ ಇರಬಾರದು ಮತ್ತು ವಿದ್ಯುತ್ ಉಪಕರಣಗಳಿಂದ ದೂರವಿರುವಂತೆ ಸೂಚಿಸಲಾಗಿದೆ. ಬಿರುಗಾಳಿಯಿಂದಾಗಿ ಮರಗಳು ಅಥವಾ ದುರ್ಬಲ ಕಟ್ಟಡಗಳು ಬೀಳುವ ಸಾಧ್ಯತೆಯಿರುವುದರಿಂದ ಎಚ್ಚರಿಕೆ ವಹಿಸುವುದು ಅಗತ್ಯ.
ಇದನ್ನೂ ಓದಿ: ಹವಾಮಾನ ವರದಿ: ವಾರಾಂತ್ಯಕ್ಕೆ ಬೆಂಗಳೂರಲ್ಲಿ ವರುಣನ ಅಬ್ಬರ, ಮೇ 17ರ ವರೆಗೆ ರಾಜ್ಯದ ವಿವಿಧೆಡೆ ಮಳೆ
ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ‘ಯೆಲ್ಲೋ’ ಹಾಗೂ ‘ಆರೆಂಜ್’ ಅಲರ್ಟ್!
ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ಮಳೆಯ ಆರ್ಭಟ ಶುರುವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 15 ರಿಂದ 18 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಕೆಲವು ಪ್ರದೇಶಗಳಲ್ಲಿ 64.5mm ನಿಂದ 115.5mm ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಐಎಂಡಿ ಈ ಜಿಲ್ಲೆಗಳಲ್ಲಿ ಯೆಲ್ಲೋಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದೆ. ಗುಡುಗು, ಮಿಂಚು ಮಾತ್ರವಲ್ಲದೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆ ಇರುವುದರಿಂದ ಈ ಭಾಗದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 4:35 pm, Fri, 15 May 26