Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? – Kannada News | Bangalore Metro Fare Hike: BMRCL Approves 5 percent Increase Amidst Passenger Opposition

ವಿರೋಧದ ನಡುವೆಯು BMRCL ಬೋರ್ಡ್ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು?

ಬೆಂಗಳೂರು, ಫೆಬ್ರುವರಿ 04: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೋರ್ಡ್ ಸಭೆಯಲ್ಲಿ ಶೇ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಆದರೆ ಈ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದ್ದು, ಅದಕ್ಕಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರ್ಕಾರದ ಒಪ್ಪಿಗೆ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.

ಕಳೆದ ವರ್ಷ ಫೆಬ್ರವರಿ 9ರಂದು ಮೆಟ್ರೋ ಟಿಕೆಟ್ ದರವನ್ನು ಶೇ101.5ರಷ್ಟು ಏರಿಸಲಾಗಿತ್ತು. ಇದಕ್ಕೆ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇವಲ ಮೂರು ದಿನಗಳಲ್ಲೇ ದರವನ್ನು ಶೇ.71.5ಕ್ಕೆ ಇಳಿಸಲಾಗಿತ್ತು. ಆ ಘಟನೆ ಇನ್ನೂ ಪ್ರಯಾಣಿಕರ ಮನಸ್ಸಿಂದ ಮಾಸುವ ಮೊದಲೇ ಮತ್ತೆ ದರ ಏರಿಕೆಯ ಚರ್ಚೆ ಆರಂಭವಾಗಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದೀಗ ಶೇ 5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು, ಸರ್ಕಾರದ ಅಂತಿಮ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ. ಪ್ರಯಾಣಿಕರ ವಿರೋಧದ ನಡುವೆಯೂ ದರ ಏರಿಕೆಗೆ ನಿಗಮ ಪಟ್ಟು ಹಿಡಿದಿದೆ ಎನ್ನಲಾಗುತ್ತಿದೆ.

ದರ ಏರಿಕೆ ವಿರೋಧಿಸಿದ್ದ ಸಂಸದ ತೇಜಸ್ವಿ ಸೂರ್ಯ

ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ ಅಧಿಕಾರಿಗಳು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗೊಂದಲದ ನಡುವೆ ವಾರ್ಷಿಕ ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಅಣಿಯಾಗಿದ್ದನ್ನು ಸಂಸದ ತೇಜಸ್ವಿ ಸೂರ್ಯ ವಿರೋಧಿಸಿದ್ದರು. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳ ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರವನ್ನೂ ಬರೆದಿದ್ದರು.

ಇದನ್ನೂ ಓದಿ Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ

ನಿಗಮದ ಈ ನಿರ್ಧಾರದ ಕುರಿತು ಪ್ರಯಾಣಿಕರೂ ಆಕ್ರೋಶ ಹೊರಹಾಕಿದ್ದರು. ಈ ವರ್ಷ ಮಾಡಿರುವ ದರ ಏರಿಕೆ ತಪ್ಪಿನಿಂದ ಮುಂದಿನ ವರ್ಷಗಳಲ್ಲೂ ಪ್ರಯಾಣಿಕರಿಗೆ ಹೆಚ್ಚುವರಿ ಹೊರೆ ಆಗಲಿದೆ. ಮೊದಲು ತಪ್ಪು ಲೆಕ್ಕ ಕೊಟ್ಟು ಏರಿಕೆ ಮಾಡಿರುವ ದರವನ್ನು ಇಳಿಸಲಿ,ನಂತರ ಪ್ರತಿವರ್ಷ ಬೇಕಾದರೆ 5% ರಷ್ಟು ಏರಿಕೆ ಮಾಡಲಿ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದರು. ಆದರೆ ಈ ಎಲ್ಲಾ ವಿರೋಧದ ನಡುವೆಯೂ ಮೆಟ್ರೋ ದರ ಏರಿಕೆಗೆ ನಿಗಮ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *