ಬೆಂಗಳೂರು, ಜೂನ್ 25: ರಾಜ್ಯದಲ್ಲಿ ಎನ್.ಸಿ.ಇ.ಆರ್.ಟಿ (NCERT) ಮತ್ತು ಸಿ.ಬಿ.ಎಸ್.ಇ (CBSE) ಪಠ್ಯಪುಸ್ತಕಗಳಲ್ಲಿ ಕೇಸರೀಕರಣದ ಆರೋಪ ಕೇಳಿಬಂದಿದೆ. ಆರನೇ ತರಗತಿಯ ಕನ್ನಡ ಪಠ್ಯದಲ್ಲಿ ಕೃಷ್ಣನಿಗ ಸಂಬಂಧಿಸಿದ ಪಾಠ ಸೇರ್ಪಡೆ, ಸಮತೋಲನ ಆಹಾರದ ವಿಚಾರದಲ್ಲಿ ಸಸ್ಯಾಹಾರಕ್ಕೆ ಮಾತ್ರ ಪ್ರೋತ್ಸಾಹ ಮತ್ತು ಕರ್ನಾಟಕದ ಪ್ರಾದೇಶಿಕ ಸೊಗಡನ್ನು ಕಡೆಗಣಿಸಿರುವ ಬಗ್ಗೆ ಹಲವರು ಧ್ವನಿ ಎತ್ತಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಿಜೆಪಿ ಸರಕಾರವು ಮಕ್ಕಳ ಮನಸ್ಸಿನ ಮೇಲೆ ಸೈದ್ಧಾಂತಿಕ ವಿಚಾರಗಳನ್ನು ಹೇರಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿಯೂ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಅನೇಕ ತಪ್ಪುಗಳು ಕಂಡುಬಂದಿದ್ದವು ಎಂದು ಮಧು ಬಂಗಾರಪ್ಪ ನೆನಪಿಸಿಕೊಂಡಿದ್ದಾರೆ. ಮಕ್ಕಳ ಶಿಕ್ಷಣವು ಯಾವಾಗಲೂ ಅವರ ಹಿತಾಸಕ್ತಿಗೆ ಪೂರಕವಾಗಿರಬೇಕು ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
