Headlines

NDMA Disaster Alert Message: ನಿಮ್ಮ ಫೋನ್‌ಗೆ ‘ಎಮರ್ಜೆನ್ಸಿ ಅಲರ್ಟ್’ ಬಂದಿದೆಯೇ? ಗಾಬರಿ ಬೇಡ, ಇದು ಕೇಂದ್ರ ಸರ್ಕಾರದ ಹೊಸ ತಂತ್ರಜ್ಞಾನದ ಪರೀಕ್ಷೆ! – Kannada News | India’s New Emergency Alert System: Cell Broadcast and SACHET Explained

ಬೆಂಗಳೂರು: ಇಂದು (ಮೇ 2) ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಸೈಲೆಂಟ್ ಮೋಡ್‌ನಲ್ಲಿದ್ದ ಫೋನ್‌ಗಳೂ ಸಹ ಜೋರಾಗಿ ಶಬ್ದ ಮಾಡುತ್ತಾ ಕಂಪಿಸಲು (Vibrate) ಶುರುಮಾಡಿದ್ದರಿಂದ ಆತಂಕಕ್ಕೊಳಗಾಗುವುದು ಸಹಜ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್‌ಕಾಸ್ಟ್’ (Cell Broadcast) ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ.

ಅಮಿತ್ ಶಾ ಅವರಿಂದ ಅಧಿಕೃತ ಚಾಲನೆ:

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ದೆಹಲಿಯಲ್ಲಿ ಈ ಸ್ವದೇಶಿ ವಿಪತ್ತು ಸಂವಹನ ವ್ಯವಸ್ಥೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಭಾರತದ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳಲ್ಲಿ ಇಂದು ಈ ಪರೀಕ್ಷಾರ್ಥ ಸಂದೇಶಗಳನ್ನು ರವಾನಿಸಲಾಗಿದೆ.

ಇದನ್ನೂ ಓದಿ: ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಮಹಿಳೆಯ ಸಾವಿನ ರಹಸ್ಯ

ಏನಿದು ‘ಸಚೇತ್’ (SACHET) ವ್ಯವಸ್ಥೆ?

ಈ ತಂತ್ರಜ್ಞಾನವನ್ನು ದೂರಸಂಪರ್ಕ ಇಲಾಖೆ (DoT) ಮತ್ತು ಸಿ-ಡಾಟ್ (C-DOT) ಸಂಸ್ಥೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ. ಇದು ಇಂಟರ್ನೆಟ್ ಅಥವಾ ನೆಟ್‌ವರ್ಕ್ ದಟ್ಟಣೆಯ ಮೇಲೆ ಅವಲಂಬಿತವಾಗಿಲ್ಲ. ಬದಲಾಗಿ, ನಿರ್ದಿಷ್ಟ ಪ್ರದೇಶದ ಎಲ್ಲಾ ಮೊಬೈಲ್ ಟವರ್​ ಮೂಲಕ ಏಕಕಾಲದಲ್ಲಿ ಸಂದೇಶಗಳನ್ನು ರವಾನಿಸುತ್ತದೆ. ಭೂಕಂಪ, ಸುನಾಮಿ, ಚಂಡಮಾರುತ, ಮಿಂಚು ಅಥವಾ ಅನಿಲ ಸೋರಿಕೆಯಂತಹ ತುರ್ತು ಸಂದರ್ಭಗಳಲ್ಲಿ ಜನರನ್ನು ಕೇವಲ ಸೆಕೆಂಡುಗಳಲ್ಲಿ ಎಚ್ಚರಿಸಿ ಸುರಕ್ಷಿತ ಸ್ಥಳಕ್ಕೆ ತೆರಳಲು ಸಮಯ ನೀಡುವ ಉದ್ದೇಶವನ್ನು ಇದು ಹೊಂದಿದೆ.

ಈ ಅಲರ್ಟ್‌ನ ವಿಶೇಷತೆಗಳೇನು?

ಇದು ತುರ್ತು ಸಂದೇಶವಾದ್ದರಿಂದ ಫೋನ್ ಯಾವುದೇ ಸ್ಥಿತಿಯಲ್ಲಿದ್ದರೂ ಜೋರಾದ ಸೈರನ್ ಮೂಲಕ ನಿಮ್ಮ ಗಮನ ಸೆಳೆಯುತ್ತದೆ. ಕನ್ನಡ ಸೇರಿದಂತೆ ಸುಮಾರು 19ಕ್ಕೂ ಹೆಚ್ಚು ಭಾರತೀಯ ಭಾಷೆಗಳಲ್ಲಿ ಈ ಸಂದೇಶಗಳನ್ನು ಕಳುಹಿಸುವ ಸಾಮರ್ಥ್ಯವನ್ನು ಇದು ಹೊಂದಿದೆ. ಈಗ ಬಂದಿರುವುದು ಕೇವಲ ಪರೀಕ್ಷಾರ್ಥ ಸಂದೇಶ (Test Message). ಇದಕ್ಕಾಗಿ ನೀವು ಯಾವುದೇ ಆತಂಕ ಪಡುವ ಅಥವಾ ಲಿಂಕ್‌ಗಳನ್ನು ಕ್ಲಿಕ್ ಮಾಡುವ ಅವಶ್ಯಕತೆಯಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:19 pm, Sat, 2 May 26

Source link

Leave a Reply

Your email address will not be published. Required fields are marked *