NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2026-27ನೇ ಸಾಲಿನ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET-UG 2026) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಅವಕಾಶವೊಂದನ್ನು ನೀಡಿದೆ. ಈ ಹಿಂದೆ ಮಾರ್ಚ್ 8ಕ್ಕೆ ಮುಕ್ತಾಯವಾಗಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಇದೀಗ ಮಾರ್ಚ್ 11 ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಮಾರ್ಚ್ 11ರ ರಾತ್ರಿ 11:59 ರವರೆಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ (ಅಥವಾ ಜೈವಿಕ ತಂತ್ರಜ್ಞಾನ) ವಿಷಯಗಳೊಂದಿಗೆ ವಿಜ್ಞಾನ ವಿಭಾಗದಲ್ಲಿ ಇಂಟರ್ಮೀಡಿಯೇಟ್ ಅಥವಾ ಪಿಯುಸಿ ಉತ್ತೀರ್ಣರಾದ ಹಾಗೂ ಕನಿಷ್ಠ 17 ವರ್ಷ ವಯೋಮಿತಿ ಹೊಂದಿರುವ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 1700, ಇಡಬ್ಲ್ಯೂಎಸ್/ಒಬಿಸಿ-ಎನ್‌ಸಿಎಲ್ ವರ್ಗದವರಿಗೆ ರೂ. 1600 ಹಾಗೂ ಎಸ್‌ಸಿ/ಎಸ್‌ಟಿ/ದಿವ್ಯಾಂಗ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳಿಗೆ ರೂ. 1000 ನೋಂದಣಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಮೇ 3 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇಶಾದ್ಯಂತ ಪೆನ್ ಮತ್ತು ಪೇಪರ್ (ಆಫ್‌ಲೈನ್) ಮಾದರಿಯಲ್ಲಿ ಪರೀಕ್ಷೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು 011-40759000/69227700 ಸಂಖ್ಯೆಗಳನ್ನು ಅಥವಾ neetug2026@nta.ac.in ಇ-ಮೇಲ್ ಅನ್ನು ಸಂಪರ್ಕಿಸಬಹುದಾಗಿದೆ. ಸರ್ವರ್ ಡೌನ್​ ಸಮಸ್ಯೆ ತಪ್ಪಿಸಲು ಕೊನೆಯ ಕ್ಷಣದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸುವುದು ಉತ್ತಮ ಎಂದು NTA ಸೂಚಿಸಿದೆ.

NEET UG ಆನ್‌ಲೈನ್ ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *