ಇಂದಿನ ಒತ್ತಡದ ಜೀವನಶೈಲಿ ಹಾಗೂ ಬದಲಾಗುತ್ತಿರುವ ಪರಿಸರದಿಂದಾಗಿ ಜನರಲ್ಲಿ ನೂರಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಯಾವ ಸಮಸ್ಯೆಗೆ ಯಾವ ಚಿಕಿತ್ಸೆ ಪಡೆಯಬೇಕು ಎಂಬುದು ಒಂದು ದೊಡ್ಡ ಚಿಂತೆಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ, ನಿಮ್ಮ ಡಾಕ್ಟರ್ ಕಾರ್ಯಕ್ರಮವು ಎಲ್ಲರಿಗೂ ಒಂದೇ ವೇದಿಕೆಯಲ್ಲಿ ಉತ್ತರಗಳನ್ನು ಒದಗಿಸುವ ಮೂಲಕ ಸಹಾಯ ಮಾಡುತ್ತಿದೆ.
ಮನುಷ್ಯನನ್ನು ಮಾರಣಾಂತಿಕವಾಗಿ ಕಾಡುವ ರೋಗಗಳಲ್ಲಿ ಕ್ಯಾನ್ಸರ್ ಪ್ರಮುಖವಾಗಿದೆ. ಕ್ಯಾನ್ಸರ್ ಎಂಬ ಹೆಸರು ಕೇಳಿದ ಕೂಡಲೇ ಜನ ಚಿಕಿತ್ಸೆಯ ಬಗ್ಗೆ ಯೋಚಿಸುವುದಕ್ಕಿಂತ ಹೆಚ್ಚಾಗಿ ಭಯಭೀತರಾಗುತ್ತಾರೆ. ಇಂದಿನ ವೈದ್ಯಕೀಯ ಲೋಕದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಬಂದಿದ್ದರೂ ಸಹ, ಕ್ಯಾನ್ಸರ್ ಕುರಿತ ಭೀತಿ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಅದರಲ್ಲೂ ಮಕ್ಕಳಲ್ಲಿ ಕ್ಯಾನ್ಸರ್ ಕಾಣಿಸಿಕೊಂಡಾಗ ಕುಟುಂಬಗಳಿಗೆ ದೊಡ್ಡ ಆತಂಕ ಎದುರಾಗುತ್ತದೆ. ಬೆಂಗಳೂರಿನ ಸಂಪಂಗಿರಾಮನಗರದಲ್ಲಿರುವ ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆಯು ಮಕ್ಕಳಲ್ಲಿನ ಕ್ಯಾನ್ಸರ್ ಚಿಕಿತ್ಸೆಗೆ ಅತ್ಯಾಧುನಿಕ ವಿಧಾನಗಳನ್ನು ಒದಗಿಸುತ್ತಿದೆ. ಸರಿಯಾದ ಮಾಹಿತಿ ಮತ್ತು ಸಮಯೋಚಿತ ಚಿಕಿತ್ಸೆಯೊಂದಿಗೆ ಈ ಭಯವನ್ನು ನಿವಾರಿಸಬಹುದು ಮತ್ತು ಕ್ಯಾನ್ಸರ್ ಅನ್ನು ಗುಣಪಡಿಸಲು ಸಾಧ್ಯವಿದೆ ಎಂದು ತಜ್ಞರು ತಿಳಿಸಿದ್ದಾರೆ.
ಮತ್ತಷ್ಟು ಓದಿ: 2 ವರ್ಷದೊಳಗಿನ ಮಕ್ಕಳಿಗೆ ಶೀತ, ಕೆಮ್ಮಿನ ಸಿರಪ್ ನೀಡಬೇಡಿ; 11 ಮಕ್ಕಳ ಸಾವಿನ ಬಳಿಕ ಕೇಂದ್ರ ಸರ್ಕಾರ ಎಚ್ಚರಿಕೆ
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.